ಧರ್ಮಸ್ಥಳದಲ್ಲಿ ಭಜನಾ ತರಬೇತಿ ಶಿಬಿರ: ಸಮಾರೋಪ ಸಮಾರಂಭ

September 23, 2019
12:00 PM

ಧರ್ಮಸ್ಥಳ: ಬದುಕು ಸುಖ-ದುಃಖಗಳ ಮಿಶ್ರಣವಾಗಿದ್ದು ನಿರಂತರ ಹೋರಾಟಮಯವಾಗಿರುತ್ತದೆ. ಮಾನವಜನ್ಮ ಅಮೂಲ್ಯವಾಗಿದ್ದು ನಿತ್ಯವೂ ಶ್ರದ್ಧಾ-ಭಕ್ತಿಯಿಂದ, ಪರಿಶುದ್ಧ ಮನಸ್ಸಿನಿಂದ ಭಜನೆ ಮಾಡಿದಾಗ ನಮ್ಮಲ್ಲಿರುವ ಸಕಲ ದೋಷಗಳ ನಿವಾರಣೆಯಾಗಿ ಅಂತರಂಗದಲ್ಲಿ ದೈವತ್ವ ಹಾಗೂ ಉತ್ತಮ ಸಂಸ್ಕಾರ ಜಾಗೃತವಾಗುತ್ತದೆ. ತನ್ಮೂಲಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

Advertisement

ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಒಂದು ವಾರ ನಡೆದ ಇಪ್ಪತ್ತೊಂದನೆ ವರ್ಷದ ಭಜನಾ ತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ತನ್ನಂತೆ ಪರರ ಬಗೆದು ಬದುಕುವುದೇ ಮಾನವತ್ವವಾಗಿದೆ. ಸಂಸ್ಕಾರದ ಸಮಷ್ಟಿ ರೂಪವೇ ಸಂಸ್ಕೃತಿ ಆಗಿದೆ. ಇಡೀ ವಿಶ್ವವೇ ಒಂದು ಕುಟುಂಬ ಎಂಬ ಭಾವನೆಯೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸೌಹಾರ್ದಯುತ ಜೀವನ ನಡೆಸಲು ಸಂಸ್ಕಾರ ಪ್ರೇರಣೆ ನೀಡುತ್ತದೆ ಎಂದು ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಹಿರೇಮಗಳೂರು ಕಣ್ಣನ್ ಶುಭಾಶಂಸನೆ ಮಾಡಿ, ಭಜನೆಯಿಂದ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ .ಗೂಗಲ್ ಮುಂದೆ ಗೂಬೆಗಳಾಗುವ ಬದಲು ಭಜನಾ ಸಂಸ್ಕೃತಿ ಮೂಲಕ ಸಾರ್ಥಕ ಜೀವನ ನಡೆಸಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಭಜನಾ ಪರಿಷತ್ ಮೂಲಕ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು. ಭಜನಾ ತರಬೇತಿ ಪಡೆದವರು ಆಯಾಗ್ರಾಮದಲ್ಲಿ ಸಾಂಸ್ಕೃತಿಕ ರಾಯಭಾರಿಗಳಾಗಿ ಸಮಾಜದ ಸಂಘಟನೆಗೆ ಪ್ರಯತ್ನಿಸಬೇಕು. ವ್ಯವಹಾರದಲ್ಲಿ ಸದಾ ಧಾರ್ಮಿಕ ಪ್ರಜ್ಞೆ ಇರಬೇಕು. ಜನರ ಸುಖ-ಕಷ್ಟಕ್ಕೆ ಸಮನಾಗಿ ಸ್ಪಂದಿಸಬೇಕು. ಸಂಸಾರದಲ್ಲಿ ಹಾಗೂ ಸಮಾಜದ ಸಮಸ್ಯೆಗಳನ್ನು ಸೌಹಾರ್ಧಯುತವಾಗಿ ಪರಿಹರಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಶಾಸಕ ಹರೀಶ್ ಪೂಂಜ, ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.
ಭಜನಾ ತರಬೇತಿ ಶಿಬಿರದ ಕಾರ್ಯದರ್ಶಿ ಮಮತಾರಾವ್ ವರದಿ ಸಾದರ ಪಡಿಸಿದರು. ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಬಿ. ಜಯರಾಮ ನೆಲ್ಲಿತ್ತಾಯ ಧನ್ಯವಾದವಿತ್ತರು.ಶ್ರೀನಿವಾಸ ರಾವ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group