ಧರ್ಮಸ್ಥಳದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಣೆ: ರೋಗಿಗಳ ಸೇವೆಯೇ ದೇವರ ಸೇವೆ

November 18, 2019
6:30 PM

ಉಜಿರೆ: ವೈದ್ಯರು ಮಾನವೀಯತೆಯೊಂದಿಗೆ ಹಾಗೂ ನಗುಮುಖದಿಂದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

Advertisement
Advertisement
Advertisement
Advertisement

ಅವರು ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆ, ಜೈಲು ಮತ್ತು ರುದ್ರಭೂಮಿ ನೋಡಿದಾಗ ನಮಗೆ ಆಧುನಿಕ ಜೀವನದ ಸಮಸ್ಯೆಗಳ ಅರಿವಾಗುತ್ತದೆ. ಆಧುನಿಕ ಜೀವನ ಶೈಲಿ, ಆಹಾರ ಸೇವನಾ ಕ್ರಮ, ಸದಾ ಒತ್ತಡದ ಕೆಲಸಗಳು, ಅತಿಯಾದ ತಂತ್ರಜ್ಞಾನದ ಬಳಕೆ, ವಾಯುಮಾಲಿನ್ಯ, ಮೊಬೈಲ್ ಫೋನ್ ಬಳಕೆ ಇತ್ಯಾದಿ ಕಾರಣಗಳಿಂದ ಇಂದು ಎಳೆಯ ಪ್ರಾಯದಲ್ಲೇ ಮನುಷ್ಯರು ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತ ಮೊದಲಾದ ಭೀಕರ ರೋಗಗಳಿಗೆ ಬಲಿಯಾಗುತ್ತಾರೆ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದಿಂದ ನಾವು ಸಂಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದಬಹುದು ಎಂದು ಅವರು ಹೇಳಿದರು.

Advertisement

ಕೀಳರಿಮೆ ಹಾಗೂ ಅಹಂ ತ್ಯಜಿಸಿ ಧನಾತ್ಮಕ ಚಿಂತನೆಯೊಂದಿಗೆ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು. ವೈದ್ಯರು ರೋಗಿಗಳೊಂದಿಗೆ ನಗುಮೊಗದಿಂದ ಮಾನವೀತೆಯಿಂದ ಮಾತನಾಡಿ, ಶುಶ್ರೂಷೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು. ಅಲೋಪತಿ, ಹೋಮಿಯೋಪತಿ, ನಾಚುರೋಪತಿ ಇತ್ಯಾದಿ ವೈದ್ಯಕೀಯ ಪದ್ಧತಿಗಳಿಗಿಂತಲೂ ಮಿಗಿಲಾಗಿ ವೈದ್ಯರಿಗೆ ರೋಗಿಗಳಲ್ಲಿ ಸಿಂಪತಿ ಇರಬೇಕು ಎಂದು ಅವರು ಹೇಳಿದರು. ಉಪವಾಸ, ವ್ಯಾಯಾಮ, ಯೋಗಾಭ್ಯಾಸ, ನಿತ್ಯ ನಡಿಗೆ ಇತ್ಯಾದಿ ಕ್ರಿಯೆಗಳಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ಡಾ.ಮಂಜುನಾಥ್‍ ಅಭಿಪ್ರಾಯಪಟ್ಟರು.

Advertisement

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವು ಪಂಚೇಂದ್ರಿಯಗಳ ದಾಸರಾಗಬಾರದು, ಒಡೆಯರಾಗಬೇಕು. ಪಂಚೇಂದ್ರೀಯಗಳ ನಿಯಂತ್ರಣದಿಂದ ರೋಗರಹಿತವಾಗಿ ಆರೋಗ್ಯಪೂರ್ಣ ಜೀವನ ನಡೆಸಬಹುದು. ಧಾರ್ಮಿಕ ಆಚಾರ-ವಿಚಾರಗಳ ಅನುಷ್ಠಾನದಿಂದ, ಸದಾಚಾರದೊಂದಿಗೆ ಆದರ್ಶಜೀವನ ನಡೆಸಬೇಕು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಯೋಗ, ಪ್ರಾರ್ಥನೆ, ಧ್ಯಾನ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯನ್ನು ಸ್ವಯಂ ಅನುಷ್ಠಾನ ಮಾಡಿ ಆಚಾರ್ಯರಾದರು ಎಂದು ಹೆಗ್ಗಡೆಯವರು ಹೇಳಿದರು.

ಪ್ರಕೃತಿಚಿಕಿತ್ಸಾ ವೈದ್ಯರು ಕೀಳರಿಮೆ ಹೊಂದದೆ ಅಭಿಮಾನದಿಂದ ಈ ಪದ್ಧತಿಯ ರಾಯಭಾರಿಗಳಾಗಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಡಾ. ನವೀನ್ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಮಹತ್ವ ವಿವರಿಸಿದರು. ಆಯುಷ್‍ ಇಲಾಖೆಯ ಜಂಟಿ ನಿರ್ದೇಶಕ ಡಾ.ಶ್ರೀಧರ ಭಟ್, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

Advertisement

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಮೂಡಬಿದ್ರೆಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ರೈ ಧನ್ಯವಾದವಿತ್ತರು. ಜೋಸ್ನಾ ಮತ್ತು ಅನನ್ಯ ಕಾರ್ಯಕ್ರಮ ನಿರ್ವಹಿಸಿದರು. ಎಂಟು ಕಾಲೇಜುಗಳಿಂದ ಮುನ್ನೂರು ಪ್ರತಿನಿಧಿಗಳು ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror