ನ. 24: ಸವಣೂರು ವಿದ್ಯಾರಶ್ಮಿಯಲ್ಲಿ ಮೆಗಾ ಮೆಡಿಕಲ್ ಕ್ಯಾಂಪ್

October 18, 2019
11:56 AM

ಸವಣೂರು : ಎ.ಜೆ.ಆಸ್ಪತ್ರೆ ಮಂಗಳೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು, ಯುವಕ ಮಂಡಲ ಸವಣೂರು, ಲಯನ್ಸ್ ಕ್ಲಬ್ ಪುತ್ತೂರು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಜನಜಾಗೃತಿ ವೇದಿಕೆ ಸವಣೂರು ವಲಯದ ಆಶ್ರಯದಲ್ಲಿ ಸವಣೂರು, ಬೆಳಂದೂರು, ಕಾಣಿಯೂರು ಗ್ರಾ.ಪಂ ಹಾಗೂ ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಕಾರದಲ್ಲಿ ನ. 24ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮೆಗಾ ಮೆಡಿಕಲ್ ಕ್ಯಾಂಪ್ ನಡೆಯಲಿದೆ. ಇದರ ಪೂರ್ವಭಾವಿ ಸಭೆಯು ಪುತ್ತೂರು ದರ್ಬೆ ಪ್ರಶಾಂತ್ ಮಹಲ್‍ನಲ್ಲಿ ಜರಗಿತು.

Advertisement
Advertisement

ಸಭೆಯ ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಮಾತನಾಡಿ ಸವಣೂರಿನ ಆಸುಪಾಸಿನ 9 ಗ್ರಾಮಗಳ ಜನರ ಆರೋಗ್ಯಕ್ಕಾಗಿ ಈ ಮೆಡಿಕಲ್ ಕ್ಯಾಂಪ್‍ನ್ನು ಆಯೋಜಿಸಲಾಗಿದ್ದು, ಈ ಕ್ಯಾಂಪ್‍ನಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರ ಎಲ್ಲ ರೀತಿಯ ಅರೋಗ್ಯ ತಪಾಸಣೆಯು ನಡೆಯಲಿದೆ, ಎ.ಜೆ.ಆಸ್ಪತ್ರೆಯ ನುರಿತ ವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯುವಂತೆ ವಿನಂತಿಸಿದರು.
ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಎ.ಜೆ. ಆಸ್ಪತ್ರೆಯ ದಿಲೀಪ್, ಸುಮಂತ್, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ರಂಜನ್ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ, ಪದವಿ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮಿ ಎಸ್ ರೈ, ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಿನಾರ, ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಸವಣೂರು, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ.ರವರುಗಳು ಭಾಗವಹಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ನಿಮ್ಮ ಆರೋಗ್ಯವನ್ನು ಪುನರುಜ್ಜೀವನಗೊಳಿಸಿ | 10 ಆಶ್ಚರ್ಯಕರ ಆಯುರ್ವೇದ ಉಪಾಯಗಳು !
July 24, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group