ನ ಪಂ ಚುನಾವಣೆ : 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕೋಟ ಶ್ರೀನಿವಾಸ ಪೂಜಾರಿ

May 22, 2019
2:41 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ 20 ವಾರ್ಡ್‌ ಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ಇದೆ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement
Advertisement

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ನಗರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಒಳಚರಂಡಿ ವ್ಯವಸ್ಥೆ ಒದಗಿಸಿ ಸುಳ್ಯವನ್ನು ಮಾದರಿ ಪಟ್ಟಣ ಪಂಚಾಯತ್ ಮಾಡುವ ಯೋಜನೆ ಬಿಜೆಪಿಯದ್ದು. ನಗರದ ಸಮಗ್ರ ಅಭಿವೃದ್ಧಿಯ ಪ್ರಣಾಳಿಕೆಯನ್ನು ಜನರ ಮುಂದಿಡುತ್ತೇವೆ‌. ಮುಂದೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಈ ಸಂದರ್ಭದಲ್ಲಿ ವಿಶೇಷ ಅನುದಾನ ತರಿಸಿ ನಗರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಳೆದ ಮೂರು ಅವಧಿಯಲ್ಲಿ ಜನಪರ ಮತ್ತು ಪಾರದರ್ಶಕ ಆಡಳಿತವನ್ನು ನೀಡಲಾಗಿದ್ದು ನಗರದ ಮೂಲಭೂತ ಅಭಿವೃದ್ಧಿ ನಡೆಸಲಾಗಿದೆ ಎಂದರು. ಈ ಬಾರಿ ಜನರ ಮಧ್ಯೆ ಇರುವ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಅಸಮಾಧಾನ ಸಹಜ. ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಅಂಗಾರ, ನ.ಪಂ.ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ, ಕಾರ್ಯದರ್ಶಿ ಹರೀಶ್ ಬೂಡುಪನ್ನೆ, ಪಿ.ಕೆ.ಉಮೇಶ್, ಗೋಪಾಲ ನಡುಬೈಲು, ಬೂಡು ರಾಧಾಕೃಷ್ಣ ರೈ, ಶೀನಪ್ಪ ಬಯಂಬು, ಜಾಹ್ನವಿ ಕಾಂಚೋಡು, ಮಹೇಶ್ ಮೇನಾಲ, ಕಿರಣ್ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ
May 19, 2025
8:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ
May 19, 2025
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group