ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆ ನಾಮಪತ್ರ ಸಲ್ಲಿಕೆ ಕಾವು ಪಡೆಯುತ್ತಿದೆ. ಇದಿಗ ಬಿಜೆಪಿ ಟಿಕೆಟ್ ಆಕಾಂಕ್ಷಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕೇರ್ಪಳ -ಪುರಭವನ 10ನೇ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುನಿಲ್ ಕುಮಾರ್ ಕೆ.ಸಿ. ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಸುನಿಲ್ ಕುಮಾರ್ ಗೆ ಟಿಕಟ್ ಸಿಗದ ಹಿನ್ನಲೆಯಲ್ಲಿ ಇವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಅವರ ನೇತೃತ್ವದಲ್ಲಿ ಸುನಿಲ್ ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯಕರ್ತರ ಅಪೇಕ್ಷೆಯ ಮೇರೆಗೆ ಸುನಿಲ್ ನಾಮಪತ್ರ ಸಲ್ಲಿಸಿರುವುದಾಗಿ ಎನ್.ಎ.ರಾಮಚಂದ್ರ ಹೇಳಿದ್ದಾರೆ. ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಇಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel