ನಗರ ಪಂಚಾಯತ್ ಚುನಾವಣೆ ಶಾಂತಿಯುತ : ಗೆಲುವಿನ ವಿಶ್ವಾಸ ಎಲ್ಲರಿಗೂ

May 29, 2019
9:37 PM

ಸುಳ್ಯ: ಸುಳ್ಯ ನಗರ ಪಂಚಾಯತ್  ಚುನಾವಣೆ  ಬುಧವಾರ   ಶಾಂತಿಯುತವಾಗಿ ನಡೆಯಿತು.

ಬೆಳಿಗ್ಗಿನಿಂದ ಮತಗಟ್ಟೆಗಳಲ್ಲಿ ಉದ್ದದ ಸರತಿ ಸಾಲು ಉಂಟಾಗಿತ್ತು. ನಗರದ ಎಲ್ಲಾ ವಾರ್ಡ್‍ಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಬಳಿಕ ಮತದಾನದ ಬಿರುಸು ಕಡಿಮೆಯಾಯಿತು. ಆ ನಂತರ ಒಬ್ಬೊಬ್ಬರೇ ಆಗಮಿಸಿ ಮತದಾನ ಮಾಡಿ ತೆರಳುತ್ತಿದ್ದುದು ಕಂಡು ಬಂತು. ಮತದಾನ ಶಾಂತವಾಗಿ ನಡೆದಿತ್ತು. ಯಾವುದೇ ಗೊಂದಲ, ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

20 ವಾರ್ಡ್‍ಗಳಲ್ಲಿಯೂ ಶಾಂತಿಯುತ ಮತದಾನ ದಾಖಲಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಸ್ಪರ್ಧೆ ನಡೆದ ವಾರ್ಡ್‍ಗಳಲ್ಲಿ ಕೆಲವು ಕಡೆ ಎಸ್‍ಡಿಪಿಐ, ಪಕ್ಷೇತರರು ಸ್ಪರ್ಧೆ ನೀಡಿ ತ್ರಿಕೋನ ಸ್ಪರ್ಧೆಯ ರಂಗು ತಂದಿತ್ತು. ಪ್ರತಿ ಎರಡು ಗಂಟೆಗಳಿಗೊಮ್ಮೆ ಚುನಾವಣಾ ಶೇಖಡಾವಾರು ಮತದಾನದ ಮಾಹಿತಿ ನೀಡಲಾಗುತ್ತಿತ್ತು. ಬೆಳಿಗ್ಗೆ ಒಂಭತ್ತಕ್ಕೆ ಶೇ.15, 11 ಗಂಟೆಯ ವೇಳೆಗೆ ಶೇ.33.47, ಒಂದು ಗಂಟೆಗೆ ಶೇ.49.88, ಮೂರು ಗಂಟೆಯ ವೇಳೆಗೆ ಶೇ.61.73 ಮತದಾನ ದಾಖಲಾಗಿತ್ತು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ನಗರ ಪಂಚಾಯತ್ ಚುನಾವಣಾಧಿಕಾರಿಗಳಾದ ಎನ್.ಮಂಜುನಾಥ್ ಮತ್ತು ದೇವರಾಜ್ ಮುತ್ಲಾಜೆ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು. ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಎರಡೂ ಪಕ್ಷಗಳಿಗೆ ಗೆಲುವಿನ ವಿಶ್ವಾಸ:

ನಗರ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸತತ ನಾಲ್ಕನೇ ಬಾರಿ ನಗರ ಪಂಚಾಯಿತಿ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ. 20ರಲ್ಲಿ 16 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರ ಪಂಚಾಯತ್ ನಲ್ಲಿ ಬದಲಾವಣೆ ಸಾಧ್ಯವಾಗಲಿದೆ ಎಂಬುದು ಕಾಂಗ್ರೆಸ್ ನಿರೀಕ್ಷೆ. 20ರಲ್ಲಿ 12 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದ್ದಾರೆ. ಉತ್ತಮ ತಂಡವನ್ನು ಕಣಕ್ಕಿಳಿಸಿದ ಕಾರಣ ಜನರು ಈ ಬಾರಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 19, 2026
3:00 PM
by: ಸಾಯಿಶೇಖರ್ ಕರಿಕಳ
“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror