ಸುಳ್ಯ: ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಳ್ಯ ನಗರ ಪಂಚಾಯತ್ ನ ಅಭಿವೃದ್ಧಿಗೂ ಸಮಗ್ರ ಯೋಜನೆಯನ್ನು ರೂಪಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸುಳ್ಯ ನಗರದ ಅಭಿವೃದ್ಧಿಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದ ಅವರು ನಗರ ಪಂಚಾಯತ್ ಚುನಾವಣೆಯ ಗೆಲುವಿಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಲೋಕಸಭಾ ಚುನಾವಣೆಯ ಗೆಲುವಿನಂತೆ ನಗರ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂದರು.
ಶಾಸಕ ಎಸ್.ಅಂಗಾರ, ಚುನಾವಣಾ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಪಿ.ಕೆ.ಉಮೇಶ್, ಎ ವಿ ತೀರ್ಥರಾಮ ಬಿಜೆಪಿ ನ.ಪಂ. ಅಭ್ಯರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel