ನಳೀಲು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಪುತ್ತೂರು ತಾ.ನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ

December 3, 2019
9:50 AM

ಸವಣೂರು: ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಿತು.

ಡಿ.1ರ ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ದೈವಸ್ಥಾನದಲ್ಲಿ ಪರಿವಾರ ದೈವಗಳಿಗೆ ತಂಬಿಲ ಸೇವೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆಗಳು ನಡೆಯಿತು.

ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಆದ್ದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಕ್ಷೇತ್ರದಲ್ಲಿ ಷಷ್ಠಿ ವ್ರತಾಚರಣೆಗೆ ಮಹತ್ವವಿದ್ದು, ಹೆಚ್ಚು ವೃತದಾರಿಗಳು ಪಾಲ್ಗೊಂಡಿದ್ದರು. ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಮೊಕ್ತೇಸರರಾದ ಮೋಹನ್‍ದಾಸ್ ರೈ, ಡಾ.ಸುಚೇತಾ ಜೆ.ಶೆಟ್ಟಿ, ನಾರಾಯಣ ರೈ ಮೊದೆಲ್ಕಾಡಿ, ಎನ್ ಚಂದ್ರಶೇಖರ್ ರೈ, ಕಿಶೋರ್ ಕುಮಾರ್, ಅರುಣ್ ಕುಮಾರ್, ಸತೀಶ್ ರೈ, ಪ್ರವೀಣ್ ಕುಮಾರ್, ಅರ್ಚಕ ಶ್ರೀನಿವಾಸ್ ಹೆಬ್ಬಾರ್, ಹರಿನಾರಾಯಣ ಮನೋಳಿತ್ತಾಯ ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror