ನಾಡಿನೆಲ್ಲೆಡೆ ಆಯುಧ ಪೂಜಾ ಸಂಭ್ರಮ

October 7, 2019
6:28 PM

ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿಜೃಂಭಣೆಯ ಆಯುಧ ಪೂಜಾ ಉತ್ಸವ ನಡೆಯಿತು. ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವದ ವಿಜೃಂಭಣೆಯ ಮಧ್ಯೆಯೇ ಸೋಮವಾರ ಆಯುಧ ಪೂಜೆ’ಯ ಸಂಭ್ರಮ ಕಂಡು ಬಂತು.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ದೇವಸ್ಥಾನಗಳಲ್ಲಿ ನಡೆದ ಆಯುಧ ಪೂಜೆಯಲ್ಲಿ ಸಾವಿರಾರು ವಾಹನಗಳನ್ನು ಪೂಜಿಸಲು ತರಲಾಗಿತ್ತು.

ವಿವಿಧ ಸರಕಾರಿ ಕಚೇರಿಗಳಲ್ಲಿ, ವಿವಿಧ ಸಂಸ್ಥೆಗಳ ಕಚೇರಿ, ಅಂಗಡಿ, ಗ್ಯಾರೇಜ್, ಮಳಿಗೆ ಸಹತ ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿ ವಿವಿಧೆಡೆ ಸಂಭ್ರಮದಿಂದ ಆಯುಧ ಪೂಜೆ ನಡೆಯಿತು. ಎಲ್ಲೆಡೆ ವರ್ಣಮಯ ಶೃಂಗಾರವನ್ನು ಮಾಡಲಾಗಿತ್ತು. ಸಾವಿರಾರು ವಾಹನಗಳ ಪೂಜೆ ನಡೆಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ದಸರಾ ಉತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಸುಳ್ಯ ಶಾರದಾಂಬಾ ಉತ್ಸವದ ವೇದಿಕೆಯಲ್ಲಿಯೂ ಆಯುಧ ಪೂಜೆ ನಡೆಯಿತು. ನೂರಾರು ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
ಸೋಮವಾರ ಬೆಳಿಗ್ಗೆ ಆರಂಭಗೊಂಡ ಆಯುಧ ಪೂಜಾ ಉತ್ಸವ ರಾತ್ರಿಯವರೆಗೂ ಮುಂದುವರಿಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಹಿತ ಎಲ್ಲಾ ವಾಹನಗಳನ್ನು ಶ್ರೀಗಂಧ, ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿತ್ತು. ಆಯುಧ ಪೂಜೆ ಪ್ರಯುಕ್ತ ಹೂ, ಹಣ್ಣು ಹಂಪಲು, ತೆಂಗಿನ ಕಾಯಿ, ನಿಂಬೆ ಹಣ್ಣಿಗೆ ಭಾರೀ ಬೇಡಿಕೆ ಇತ್ತು. ರಸ್ತೆ ಬದಿಗಳಲ್ಲಿಯೂ ಹೂವಿನ ಮಾರಾಟದ ಭರಾಟೆ ಕಂಡು ಬಂದಿತ್ತು. ಸೇವಂತಿಗೆ, ಮಲ್ಲಿಗೆ ಮತ್ತಿತರ ಹೂವುಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಆಯುಧ ಪೂಜೆಗೆ ಲಿಂಬೆಹಣ್ಣು ಮತ್ತು ಹಸಿ ಮೆಣಸಿನ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಹೆಚ್ಚಿನ ಬೇಡಿಕೆ ಇತ್ತು ಎನ್ನುತ್ತಾರೆ ವ್ಯಾಪಾರಿಗಳು.
ಹಲವು ಕಡೆಗಳಲ್ಲಿ ಭಾನುವಾರವೂ ವಾಹನಗಳ ಪೂಜೆ ನಡೆದಿತ್ತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!
March 11, 2025
7:51 AM
by: ರಮೇಶ್‌ ದೇಲಂಪಾಡಿ
ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |
March 11, 2025
7:00 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ
March 11, 2025
6:33 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |
March 10, 2025
11:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...