ನಾನು ಸಕ್ರಿಯವಾಗಿದ್ದೇನೆ – ಆರೋಗ್ಯ ಸಮಸ್ಯೆ ಇಲ್ಲ – ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

May 9, 2020
8:03 PM

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ  ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.

Advertisement

ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ  ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.

ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್‌ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ
July 2, 2025
9:36 PM
by: The Rural Mirror ಸುದ್ದಿಜಾಲ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group