ನಾರಾಯಣ ಕೆ ಕುಂಬ್ರ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

October 7, 2019
11:18 AM

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕ ನಾರಾಯಣ ಕೆ ಕುಂಬ್ರ ಅವರು ತಮ್ಮ ಸಾಹಿತ್ಯ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ‘ಮಾನವರು ಸಹೋದರರು ಸೌಹಾರ್ದ ವೇದಿಕೆ’ ಹಾಗೂ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕೊಡಮಾಡುವ ಸಾಹಿತ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕ್ಟೋಬರ್ 5ರಂದು ಕುಂಬ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುದಾನ ಶಿಕ್ಷಣ ಸಂಸ್ಥೆಯ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳ ಹಾಗೂ ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜ, ಯುವ ಉದ್ಯಮಿ ಸಂಶುದ್ದೀನ್ ಎ.ಆರ್, ಚಿಂತಕ ಜಗದೀಶ್ ಪಡ್ಪು, ಕವಯತ್ರಿ ಶಾಂತ ಕುಂಟಿನಿ, ಸೌಹಾರ್ದ ವೇದಿಕೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಪುಣಚ, ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಮತ್ತಿತರರು ಉಪಸ್ಥಿತರಿದ್ದರು.

 

ನಾರಾಯಣ ಕುಂಬ್ರ ಅವರು ಹಲವಾರು ಬಾರಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಭಾಗವಹಿಸಿ ತಮ್ಮ ಕವನವನ್ನು ವಾಚಿಸಿರುತ್ತಾರೆ. ಪುತ್ತೂರಿನ ಕಡಲೂರಿನ ಲೇಖಕರು ಸಂಘಟನೆಯ ಕೋಶಾಧಿಕಾರಿಯಾಗಿ, ಪುತ್ತೂರಿನ ಸಿರಿಗನ್ನಡ ವೇದಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror