ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel