ನೆರೆ ಹಾನಿ ಪ್ರದೇಶಕ್ಕೆ 30 ಕೋಟಿ ಬಿಡುಗಡೆ

October 26, 2019
7:22 PM

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆಹಾವಳಿಯಿಂದ ಕೃಷಿ ಭೂಮಿಗಳು ಹಾಗೂ ಕಿಂಡಿಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಇವುಗಳ ದುರಸ್ತಿ ಗೆ 30 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು  ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಾದ ಕುಕ್ಕಾವು, ಪರ್ಲಾಣಿ, ಚಾರ್ಮಾಡಿ ಅರಣೆಪಾದೆ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  ಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಮಳೆ ಕಡಿಮೆಯಾದ ತಕ್ಷಣ ಹಾನಿಯಾದ ಕಿಂಡಿಅಣೆಕಟ್ಟುಗಳ ದುರಸ್ಥಿ ಕಾರ್ಯ ಮಾಡಲಾಗುವುದು. ಅಲ್ಲದೆ ನೀರು, ಕೃಷಿ ಭೂಮಿಗೆ ಬರದ ರೀತಿಯಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ಇಲ್ಲಿನ ಶಾಸಕರು ಈಗಾಗಲೇ ಮನವಿಮಾಡಿದ್ದು ಈ ಬಗ್ಗೆ ಇಲಾಖೆ ಗಂಭೀರವಾಗಿ ಚಿಂತಿಸಿದೆ ಎಂದರು.

ಶಾಸಕ ಹರೀಶ್ ಪೂಂಜಾ ತಾಲೂಕಿನಲ್ಲಿ ಹಾನಿಗೊಳಗಾದ ಪ್ರದೇಶದ ಬಗ್ಗೆ ಸಚಿವರಲ್ಲಿ ಮಾಹಿತಿ ನೀಡಿದರು. ಬಳಿಕ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಅನುದಾಣ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ತಾ.ಪಂ ಸದಸ್ಯ ಕೊರಗಪ್ಪ ಗೌಡ, ಸಣ್ಣ ನೀರಾವರಿ ಇಲಾಖಾ ಅಧೀನ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಹಾಯಕ ಇಂಜಿನಿಯರ್ ಪ್ರಸನ್ನ, ರಾಕೇಶ್, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಜಯಕೀರ್ತಿ, ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ
September 23, 2025
7:46 AM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ
September 23, 2025
7:36 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 22, 2025
7:04 PM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group