ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿವೃತ್ತಿ

May 31, 2020
10:16 AM

ಎಲಿಮಲೆ:  ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನಿತ್ಯಾನಂದ  ಮಾಪಲಕಜೆ ಸೇವೆಯಿಂದ ನಿವೃತ್ತ ರಾದರು.

ಸಹಕಾರಿ ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ  ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘದಲ್ಲಿ ನಿತ್ಯಾನಂದ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ನಿತ್ಯಾನಂದ ನಾಯಕ್  ಹಿರಿಯ ಸಹೋದ್ಯೋಗಿಗಳಾಗಿದ್ದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ  ಎ.ವಿ.ಶ್ರೀನಿವಾಸ ರಾವ್ ಮತ್ತು  ಸುಬ್ರಹ್ಮಣ್ಯ ಭಟ್ ಅವರುಗಳು ನಿತ್ಯಾನಂದ ನಾಯಕ್ ಅವರೊಂದಿಗಿನ ತಮ್ಮ ಸೇವಾವಧಿಯ ನೆನಪುಗಳನ್ನು ಮೆಲುಕು ಹಾಕಿದರು.

ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ  ಉಮೇಶ ಪ್ರಭು ಅವರು ನಿತ್ಯಾನಂದ ನಾಯಕ್ ಅವರು ಸಂಘದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ಸೇವಾನಿವೃತ್ತ ನಿತ್ಯಾನಂದ ನಾಯಕ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.

ಸಂಘದ ನಿಯೋಜಿತ ಮುಖ್ಯಕಾರ್ಯನಿರ್ವಹಣಾಧಿಕಾರಿ  ಯು.ಜಗನ್ನಾಥ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಮಹೇಶ ಗಟ್ಟಿಗಾರು ವಂದನಾರ್ಪಣೆಗೈದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror