ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ: ಜ.31 ರಂದು ವೆಬ್ ಸೈಟ್ ಅನಾವರಣ

January 30, 2020
6:02 AM

ಮಂಗಳೂರು:  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರ್ಚ್ 7 ಮತ್ತು 8ರಂದು ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ ಜ.31ರಂದು ಬೆಳಗ್ಗೆ 10:00 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರಕರ್ತರ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ,ಶಾಸಕರುಗಳಾದ ಯು.ಟಿ.ಖಾದರ್, ಡಿ.ವೇದವ್ಯಾಸ್ ಕಾಮತ್ , ಡಾ.ಭರತ್ ಶೆಟ್ಟಿ ವೈ , ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ , ಮಂಗಳೂರು ಪೊಲೀಸ್ ಆಯುಕ್ತ ಡಾ .ಪಿ ಯಸ್ ಹರ್ಷ , ದ.ಕ.ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ . ಆರ್.ಸೆಲ್ವಮಣಿ , ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ , ಅಪರ ಜಿಲ್ಲಾಧಿಕಾರಿ ಎಂ .ಜೆ .ರೂಪಾ ,ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror