ಪತ್ರಕರ್ತರ ಗ್ರಾಮ ವಾಸ್ತವ್ಯ ಸಿದ್ಧತೆ ಅಂತಿಮ ಹಂತದಲ್ಲಿ

December 17, 2019
2:43 PM

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತೆ ಅಂತಿಮ ಹಂತದಲ್ಲಿದೆ.

Advertisement

ಸಿದ್ಧತೆಯ ಕುರಿತು ಚರ್ಚಿಸಲು ಪತ್ರಕರ್ತರ ಸಂಘ, ಗ್ರಾಮ ವಾಸ್ತವ್ಯ ಸಂಚಾಲನಾ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯು ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಿ ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ಎಪಿಎಂಸಿ ನಿರ್ದೇಶಕ ವಿನಯಕುಮಾರ್ ಮುಳುಗಾಡು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ, ಪ್ರಮುಖರಾದ ಡಾ.ಯು.ಪಿ.ಶಿವಾನಂದ, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಸಚಿನ್ ಬಳ್ಳಡ್ಕ, ವಸಂತ ಬಳ್ಳಡ್ಜ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಭಾಸ್ಕರ ರೈ ಕಟ್ಟ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್ ಕೆರೆ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ದಯಾನಂದ ಕೊರತ್ತೋಡಿ, ಶ್ರೀಧಾಮ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.

ಡಿ.18 ರಂದು ಅಧಿಕಾರಿಗಳ ಸಭೆ: ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ ತಾಲೂಕು ಆಡಳಿತ, ಸುಳ್ಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮಡಪ್ಪಾಡಿ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಬಗ್ಗೆ ಚರ್ಚಿಸಲು ಪೂರ್ವ ಭಾವಿ ಸಭೆಯು ಡಿ.18 ರಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಯತೀಶ್ ಉಳ್ಳಾಳ್ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group