ಮಂಗಳೂರು: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

December 1, 2019
3:54 PM

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ-2019ಕ್ಕೆ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಆಟಗಾರ ಸೌಕಿನ್ ಶೆಟ್ಟಿ ಭಾನುವಾರ ನಗರದ ಫುಟ್‍ಬಾಲ್ ಮೈದಾನದಲ್ಲಿ ಚಾಲನೆ ನೀಡಿದರು.

ಈ ಸಂದರ್ಭ ಕರಾವಳಿಯಿಂದಲೇ ತನ್ನ ಕ್ರೀಡಾ ಬೆಳವಣಿಗೆಯನ್ನು ಸ್ಮರಿಸಿದ ಅವರು, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗಲು ಸಾಧ್ಯ. ಕರಾವಳಿಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯನ್ನು ತರುತ್ತಿದ್ದಾರೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ, ಪತ್ರಕರ್ತರದ್ದು ದಿನದ 24 ಗಂಟೆಯೂ ಬಿಡುವಿಲ್ಲದ ಕೆಲಸ. ಇದರ ಮಧ್ಯೆ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಇನ್ನಷ್ಟು ಹುಮ್ಮಸ್ಸು ಹೆಚ್ಚಿಸುವುದು ಒಳ್ಳೆಯ ಕೆಲಸ. ಮಂಗಳೂರಿನ ಪತ್ರಕರ್ತರು ಜಂಟಲ್‍ಮೆನ್‍ಗಳಾಗಿದ್ದು, ಇಲ್ಲಿ ಪೀತ ಪತ್ರಿಕೋದ್ಯಮ ಇಲ್ಲ. ಅಧಿಕಾರಿಗಳು ಮತ್ತು ಪತ್ರಕರ್ತರ ನಡುವಿನ ಬಾಂಧವ್ಯ ಇಲ್ಲಿ ಚೆನ್ನಾಗಿದ್ದು, ಇದು ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಸಮಾಜದ ಏಳಿಗೆಗೆ ನೆರವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮಾತನಾಡಿ, ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ಪತ್ರಕರ್ತರು ಯಾವಾಗಲೂ ಕ್ರಿಯಾಶೀಲರಾಗಿ ಇರಲು ಸಾಧ್ಯವಿದೆ ಎಂದರು. ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಶುಭ ಹಾರೈಸಿದರು.

ಪತ್ರಕರ್ತ ಜಿತೇಂದ್ರ ಕುಂದೇಶ್ವರ ಸ್ವಾಗತಿಸಿದರು. ದ.ಕ.ಜಿಲ್ಲಾ  ಕಾರ್ಯನಿರತ  ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರಾದ ಆತ್ಮಭೂಷಣ್, ಭಾಸ್ಕರ ರೈ ಕಟ್ಟ, ವಿಜಯ ಕೋಟ್ಯಾನ್ ಪಡು ವಿವಿಧ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪತ್ರಕರ್ತರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror