ಪತ್ರಕರ್ತರಿಗೆ ಉಚಿತ ಹೆಲ್ತ್ ಕಾರ್ಡ್- ಸಿಎಂ ಸೂಚನೆ

September 20, 2019
9:38 AM

ಬೆಂಗಳೂರು: ಪತ್ರಕರ್ತರು ಉಚಿತ ಚಿಕಿತ್ಸೆ ಪಡೆಯಲು ತಕ್ಷಣವೇ ಹೆಲ್ತ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಸಂಘದ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಮಾನ್ಯತೆ ಹೊಂದಿದ ಪತ್ರಕರ್ತರನ್ನು ಹೊರತುಪಡಿಸಿ, ಜಿಲ್ಲಾ ಮಟ್ಟದಲ್ಲಿರುವ ಪತ್ರಕರ್ತರಿಗೆ ಆಯಾ ಜಿಲ್ಲೆ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಒದಗಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಆದೇಶಿಸಿದರು.

Advertisement
Advertisement

ಅಕಾಲಿಕ ಮರಣಕ್ಕೆ ತುತ್ತಾಗುವ ಕಾರ್ಯನಿರತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪತ್ರಕರ್ತರ ನಿವೃತ್ತಿ ವೇತನ ಪಡೆಯಲು ಅಡ್ಡಿಯಾಗಿರುವ ನಿಯಮಾವಳಿಗಳನ್ನು ಸರಳೀಕರಿಸಲು ಸೂಚಿಸಿದರು. ಎಲ್ಲ ವರ್ಗದ ಆರ್ಥಿಕವಾಗಿ ಹಿಂದುಳಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ನೀಡಲು ಆದೇಶಿಸಿದ ಸಿಎಂ, ಈಗಿರುವ ವಸತಿ ಯೋಜನೆಯಲ್ಲಿ ಪತ್ರಕರ್ತರಿಗೂ ಮನೆ ನಿರ್ವಿುಸಿಕೊಡಲು ಆದ್ಯತೆ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಿರುವ ಪತ್ರಕರ್ತರ ಭವನಕ್ಕೆ ಆರ್ಥಿಕ ನೆರವು, ಕೊಪ್ಪಳದಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ ನೀಡಲಾಗುವುದು ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಐಎಫ್​ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಸಂಘದ ವತಿಯಿಂದ ನೆರೆಸಂತ್ರಸ್ತರ ನಿಧಿಗೆ 1 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group