ಸುಳ್ಯ: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
Advertisement
ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗೌರಿ ಗಣಪನನ್ನೇ ಪೂಜಿಸಬೇಕು. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಲು, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡುವುದು ನಿಲ್ಲಿಸಬೇಕು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದೆಂದು, ಹಾಗೆ ಮಾಡಿದ್ದಲ್ಲಿ, ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತದೆಂದು ಎಂದು ಸೂಚನೆ ನೀಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement