ಪಾಲಕ್ಕಾಡ್ ಅರಣ್ಯ ಪ್ರದೇಶದಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ ಮೂವರು ನಕ್ಸಲರ ಹತ್ಯೆ

October 29, 2019
5:11 PM

ತಿರುವನಂತಪುರ: ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ  ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.

ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್  2004ರಲ್ಲಿ ನಕ್ಸಲ್‌ ಸೇರಿದ್ದ.

ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ  ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ  ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.

ಕರ್ನಾಟಕದ ಗಡಿ ಭಾಗದಲ್ಲಿ  ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror