ಪುತ್ರಿಯನ್ನು ಅಂಗನವಾಡಿಗೆ ದಾಖಲಿಸಿ ಮಾದರಿಯಾದ ಮಡಿಕೇರಿ ಎಸ್‍ಪಿ ಡಾ.ಸುಮನ್

October 17, 2019
10:00 AM

ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

Advertisement
Advertisement
Advertisement

ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ ಪ್ರತಿಷ್ಠೆಯನ್ನಾಗಿ ಪರಿಗಣಿಸುತ್ತಿರುವ ಇಂದಿನ ಪೋಷಕರು ಮಕ್ಕಳು ಜನಿಸುತ್ತಲೇ ಇಂಗ್ಲೀಷ್ ಪದ ಪ್ರಯೋಗಗಳನ್ನು ಆರಂಭಿಸುತ್ತಾರೆ. ಬೇಬಿ ಸಿಟ್ಟಿಂಗ್, ಎಲ್‍ಕೆಜಿ, ಯುಕೆಜಿ ತರಗತಿಗಳಿಗಾಗಿ ವರ್ಷಗಟ್ಟಲೆ ಕಾದು ಸೀಟು ಗಿಟ್ಟಿಸಿಕೊಳ್ಳುವ ರಿಸ್ಕ್ ಕೂಡ ಪೋಷಕರ ಮೇಲಿದೆ. ಆದರೆ ಯಾವುದೇ ಪೈಪೋಟಿಗಳಿಲ್ಲದೆ ಸುಲಭ ಮಾರ್ಗ ತೋರುವ ಅಂಗನವಾಡಿಗಳು ಕಾಲ ಬುಡದಲ್ಲಿದ್ದರೂ ಅವುಗಳ ಬಗ್ಗೆ ಕನ್ನಡ ಪೋಷಕರಿಗೆ ತಾತ್ಸಾರವೇ ಹೆಚ್ಚು. ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳಂತೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯ ಕಡೆಗೆ ತಿರುಗಿಯೂ ನೋಡದಂತೆ ಮಾಡುತ್ತಾರೆ ಎನ್ನುವ ಅಪವಾದವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಡಗು ಎಸ್‍ಪಿ ಸುಮನ್ ಡಿ.ಪನ್ನೇಕರ್ ಅವರು ತಮ್ಮ ಎರಡೂವರೆ ವರ್ಷದ ಪುತ್ರಿ ಖುಷಿಯನ್ನು ಫೀ.ಮಾ.ಕಾರ್ಯಪ್ಪ ಕಾಲೇಜು ಸಮೀಪದ ಅಂಗನವಾಡಿಗೆ ದಾಖಲಿಸಿದ್ದಾರೆ.

Advertisement

ಮಕ್ಕಳಿಗೆ ಬಾಲ್ಯದಿಂದಲೇ ನೈತಿಕತೆ ಮತ್ತು ಮೌಲ್ಯಗಳ ಪಾಠ ಅಗತ್ಯವೆನ್ನುವ ಕಾರಣಕ್ಕಾಗಿ “ಖುಷಿ”ಗೆ ಅಂಗನವಾಡಿ ಮೂಲಕವೇ ಮೊದಲ ಪಾಠ ಆರಂಭಿಸುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ. ಸ್ಥಳೀಯ ಅಂಗನವಾಡಿ ವ್ಯವಸ್ಥೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಅಂಗನವಾಡಿಯ ಇತರ ಮಕ್ಕಳು “ಖುಷಿ”ಯೊಂದಿಗೆ ಖುಷಿ, ಖುಷಿಯಾಗಿ ದಿನ ಕಳೆಯುತ್ತಿರುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror