ಪುಲ್ವಾಮ ದಾಳಿಗೆ ಒಂದು ವರ್ಷ…. ಏನಾಗಿತ್ತು ಅಂದು….?

February 14, 2020
10:20 AM

ಪುಲ್ವಾಮ ದಾಳಿ ನಡೆದು ವರ್ಷ ಸಂದಿದೆ.  ಉಗ್ರರ ದಾಳಿಗೆ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರಿಗೆ  ಜೈ ಹಿಂದ್….

Advertisement
Advertisement

ಅಂದು  2019ರ ಫೆಬ್ರವರಿ 14. ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಉಗ್ರನೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ, 40 ಜನ ಸೈನಿಕರು ಹುತಾತ್ಮರಾಗಿದ್ದರು. ಉತ್ತರ ಪ್ರದೇಶದ ಒಟ್ಟು 12 ಯೋಧರು.  ರಾಜಸ್ತಾನದ 5, ಪಂಜಾಬ್ ನ 4, ಪಶ್ಚಿಮ ಬಂಗಾಳದ 2 , ಒಡಿಶಾದ 2, ಉತ್ತರಾಖಂಡದ 2, ಬಿಹಾರದ 2, ಮಹಾರಾಷ್ಟ್ರ 2, ತಮಿಳುನಾಡಿನ 2, ಅಸ್ಸಾಂ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಕೇರಳ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಕರ್ನಾಟಕದ ತಲಾ ಓರ್ವ ಯೋಧರು ಹುತಾತ್ಮರಾಗಿದ್ದರು. ರಾಜ್ಯದ ಮಂಡ್ಯ ಜಿಲ್ಲೆಯ ಎಚ್.ಗುರು (33) ಯೋಧ ಹುತಾತ್ಮರಾಗಿದ್ದರು.

ಪುಲ್ವಾಮಾ ಜಿಲ್ಲೆಯ ಆವಂತಿಪೋರ್ ಪ್ರದೇಶ ಅದು.  ವಾಹನದಲ್ಲಿ ಸೈನಿಕರು ಸಾಗುತ್ತಿದ್ದ ವೇಳೆ ಅಪಾರ  ಪ್ರಮಾಣದ ಸ್ಫೋಟಕ ತುಂಬಿಕೊಂಡು ಬಂದಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಆದಿಲ್ ಅಹ್ಮದ್  ಎಂಬಾತ  ಸೈನಿಕರ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದು 40 ಯೋಧರ ಸಾವಿಗೆ ಕಾರಣನಾದ.  ಒಟ್ಟು 70 ಆರ್ಮಿ ಟ್ರಕ್ ಗಳಲ್ಲಿ 2500 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದರು.

ಬಳಿಕ  ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತವು ಫೆ. 26 ರಂದು  ಬಾಲಾಕೋಟ್ ಪ್ರದೇಶದಲ್ಲಿದ್ದ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಪರಿಣಾಮ ಅಪಾರ ಸಂಖ್ಯೆಯಲ್ಲಿ ಜೈಶ್ ಜೈಷ್-ಎ-ಮೊಹಮ್ಮದ್ ಸಂಘಟನೆಯ 300 ಕ್ಕೂ ಹೆಚ್ಚು ಉಗ್ರಗಾಮಿಗಳು ಸತ್ತಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಪುಲ್ವಾಮ ದಾಳಿಗೆ ವರ್ಷ ಸಂದಿದೆ.

 

Advertisement

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group