ಪೋನ್ ಕದ್ದಾಲಿಕೆ ವಿಚಾರ ಸಿಬಿಐ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದ ತನಿಖೆಯೂ ನಡೆಯಲಿ – ಎಚ್ ಡಿ ಕೆ

August 19, 2019
7:37 AM

ಸುಬ್ರಹ್ಮಣ್ಯ:ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಿಖೆಗಾದರು ಒಪ್ಪಿಸಲಿ. ನನಗೇನೂ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಶ್ರೀ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಹೊಲಸು ಮತ್ತು ಸೇಡಿನ ರಾಜಕೀಯ ಒಳ್ಳೆಯದಲ್ಲ. ನನ್ನ ಮತ್ತು ಜನತೆಯ ಮಧ್ಯೆ ಅವಿಶ್ವಾಸ ಮೂಡಿಸುವ ಯತ್ನವಿದು. ಈ ಮೂಲಕ ನನ್ನ ರಾಜಕೀಯ ಅಂತ್ಯಗಾಣಿಸಲು ಷಡ್ಯಂತ್ರ ನಡೆಯುತ್ತಿದೆ, ಆದರೆ ಇದು ಸಾಧ್ಯವಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ತೀವ್ರ ತರಹದ ಪ್ರವಾಹ ಬಂದು ಜನ ಸಂಕಷ್ಟದಲ್ಲಿದ್ದಾರೆ, ಅವರ ನೆರವಿಗೆ ನಿಲ್ಲಬೇಕಿರುವುದು ನಮ್ಮ ಕರ್ತವ್ಯ. ಈ ಹೊತ್ತು ರಾಜಕಾರಣ ಮಾಡುತ್ತ ಕಾಲಹರಣ ಮಾಡುವುದನ್ನು ಬಿಟ್ಟು ಕಷ್ಟದಲ್ಲಿ ಇರುವವರ ನೆರವಿಗೆ ನಿಲ್ಲುವ ಕೆಲಸ ಮಾಡಬೇಕಿದೆ ಎಂದರು.

Advertisement

ಈ ಸಂದರ್ಭ ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ, ಪ್ರಮುಖರಾದ ಜಾಕೆ ಮಾಧವ ಗೌಡ, ಕೋಟೆ ಸೋಮಸುಂದರ ಕೂಜುಗೋಡು,ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ ಮೊದಲಾದವರಿದ್ದರು.

 

ಸಿದ್ಧರಾಮಯ್ಯ ಸಲಹೆ ಮೇರೆಗೆ ಯಡಿಯೂರಪ್ಪ ಸಿಬಿಐಗೆ ಕೊಡಲು ಮುಂದಾಗಿದ್ದಾರೆ – ಎಚ್ ಡಿ ಕೆ 

ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ಪ್ರದೇಶಕ್ಕೆ ಭೇಡಿ ನೀಡುವ ಉದ್ದೇಶದಿಂದ ಬೆಳ್ತಂಗಡಿಗೆ ಆಗಮಿಸಿದ  ಎಚ್ ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಯಡಿಯೂರಪ್ಪ ಅವರು ಸಿಬಿಐಗೆ ನೀಡಲು ಸಿದ್ದರಾಗಿದ್ದಾರೆ. ದೇವೇಗೌಡ ಕುಟುಂಬವನ್ನು ಯಾವುದೇ ಸಿಬಿಐ ತನಿಖೆಗೆ ಒಳಪಡಿಸಿದರೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಾನು ಸಿಬಿಐ ತನಿಖೆಗೆ ಸಿದ್ಧ. ಯಡಿಯೂರಪ್ಪ ಹತ್ತು ಜನ್ಮ ಎತ್ತಿ ಬಂದರೂ ನನ್ನನ್ನು ಹಾಗೂ ದೇವೇಗೌಡ ಕುಟುಂಬವನ್ನು ಏನೂ ಮಾಡಲು ಸಾಧ್ಯವಿಲ್ಲ, ಸಿಬಿಐ ಬದಲಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ನೇತೃತ್ವದಲ್ಲಿ ತನಿಖೆ ಮಾಡಿದರೂ ನಾನು ಎಲ್ಲಾ ತನಿಖೆಗೆ ಸಿದ್ಧವಾಗಿದ್ದೇನೆ. ಯಾವ ಸರಕಾರಕ್ಕೂ ನನ್ನ ಇಮೇಜ್ ನಾಶ ಮಾಡೋಕೆ ಸಾಧ್ಯವಿಲ್ಲ ಎಂದರು.
ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮೇರೆಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯರ ಮನವಿಗೆ ಶೀಘ್ರವಾಗಿ ಸ್ಫಂದಿಸಿದ ಯಡಿಯೂರಪ್ಪರಿಗೆ ಸಿದ್ದರಾಮಯ್ಯ ಪರವಾಗಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತಿದ್ದೇನೆ. ಕೇವಲ ನನ್ನ ಅವಧಿಯ ಮಾತ್ರವಲ್ಲ, ಯಡಿಯೂರಪ್ಪ ಸಿದ್ದರಾಮಯ್ಯ ಅವರ ಅಧಿಕಾರವಧಿಯಲ್ಲಾದ ಕದ್ದಾಲಿಕೆಯ ಬಗ್ಗೆ ಸಿಬಿಐಗೆ ನೀಡಲಿ ನೀಡಲಿ, ನಾನು ಸಿಬಿಐ ತನಿಖೆ ಎದುರಿಸಲು ನಾನು ಸರ್ವ ಸನ್ನದ್ದನಾಗಿದ್ದೇನೆ ಎಂದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ
April 22, 2025
5:50 PM
by: ಸಾಯಿಶೇಖರ್ ಕರಿಕಳ
ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!
April 22, 2025
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group