ಪ್ರತಿ ಗ್ರಾಮದ ನಿವೇಶನ ರಹಿತರ ಮಾಹಿತಿ ಸಂಗ್ರಹಕ್ಕೆ ಸೂಚನೆ ನೀಡಲಾಗುವುದು- ಶಾಸಕ ಅಂಗಾರ

September 21, 2019
7:17 PM

ಸುಳ್ಯ: ಪ್ರತಿ ಗ್ರಾಮದಲ್ಲಿನ ವಸತಿ ರಹಿತರ, ನಿವೇಶನ ರಹಿತರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲು ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಸುಳ್ಯ ಕ್ಷೇತ್ರದ ಪ್ರತಿಯೊಬ್ಬರಿಗೂ ಮನೆ ಮತ್ತು ಶೌಚಾಲಯ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement
Advertisement

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಿಸಿದ ಮನೆಯನ್ನು ಅಜ್ಜಾವರ ಕಲ್ತಡ್ಕದ ಮಹಮ್ಮದ್ ಕುಂಞ ಅವರಿಗೆ ಹಸ್ತಾಂತರ ಮಾಡಿ ಅವರು ಮಾತನಾಡಿದರು. ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಮೀಸಲಿಟ್ಟು ನಿವೇಶನರಹಿತರಿಗೆ ಹಂಚಬೇಕು. ಸರ್ಕಾರಿ ಭೂಮಿ ಲಭ್ಯವಿಲ್ಲದೇ ಇದ್ದರೆ ಖಾಸಗೀಯವರಿಂದ ಭೂಮಿ ಖರೀದಿಸಬೇಕು. ನಿವೇಶನರಹಿತರಿಗೆ ಮತ್ತು ವಸತಿ ರಹಿತರಿಗೆ ಅದನ್ನು ಒದಗಿಸಲು ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗುವುದು. ಪ್ರತಿ ಗ್ರಾಮ ಪಂಚಾಯಿತಿಗಳು ತಮಗೆ ಬೇಕಾದ ವಸತಿಗಳ ಗುರಿಯನ್ನು ನಿಗದಿಪಡಿಸಿ ನೀಡಿ ಮತ್ತು ಸರಿಯಾದ ಸಮಯಕ್ಕೆ ಮನೆ ಪೂರ್ತಿಗೊಳಿಸಲು ಫಲಾನುಭವಿಗಳು ಪ್ರಯತ್ನ ನಡೆಸಬೇಕು ಎಂದು ಅವರು ಸೂಚಿಸಿದರು. ದಾನ ಎಂಬುದು ವಿಶಾಲ ಅರ್ಥದ ಭಾವನೆ. ನಮ್ಮ ಹಿರಿಯರು ದಾನ ಮಾಡಿದ ಕಾರಣ ನಮಗೆ ಭವಷ್ಯ ಬಂದಿದೆ ಎಂದು ಅವರು ಹೇಳಿದರು.

Advertisement

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಮಾತನಾಡಿ ಸ್ವಂತ ನಿವೇಶನ, ಹಕ್ಕು ಪತ್ರ ಮತ್ತಿತರ ಯಾವುದೇ ದಾಖಲೆಗಳು ಇಲ್ಲದ ಕಾರಣ ಹಲವು ಕುಟುಂಬಗಳಿಗೆ ಸರ್ಕಾರದಿಂದ ಮನೆ ನಿರ್ಮಿಸಿ ಕೊಡಲು ಸಾಧ್ಯವಾಗುವುದಿಲ್ಲ. ಆದುದರಿಂದ ದಾನಿಗಳ ಸಹೃದಯಿಗಳ ಸಹಕಾರದಿಂದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿ ಕೊಂಡಿದ್ದೆವು. ಒಂದೂವರೆ ತಿಂಗಳಲ್ಲಿ ಎರಡು ಮನೆ ನಿರ್ಮಿಸಿ ಕೊಡಲಾಗಿದೆ. ದಾನಿಗಳ ನೆರವಿನಿಂದ ಇನ್ನೂ ಎರಡು ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಯೋಜನೆ ಹಾಕಿ ಕೊಳ್ಳಲಾಗಿದೆ. ಗುಡಿಸಲು ಮುಕ್ತ ತಾಲೂಕು ಗುರಿ ಎಂದರು.

Advertisement

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಗೋಪಾಲಕೃಷ್ಣ ಕರೋಡಿ, ರಹೀಂ ಬೀಜದಕಟ್ಟೆ, ತಾಜುದ್ದೀನ್, ಬಿ.ಎ.ಅಶ್ರಫ್ ಸಹದಿ, ಪದ್ಮನಾಭ ಪಾತಿಕಲ್ಲು, ಬೆಳಕು ತಂಡದ ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು.

ಶರೀಫ್ ಜಟ್ಟಿಪಳ್ಳ ಸ್ವಾಗತಿಸಿದರು. ಪ್ರಸಾದ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು.

Advertisement

ಒಂದೂವರೆ ತಿಂಗಳಲ್ಲಿ ಎರಡು ಮನೆ:

ಮನೆ ಇಲ್ಲದ ಕುಟುಂಬಗಳಿಗೆ ಮನೆ ನಿರ್ಮಿಸುವ `ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆಯನ್ನು ಕಲ್ತಡ್ಕದ ಮಹಮ್ಮದ್ ಕುಂಞ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ. ಅಜ್ಜಾವರ ಮಾವಿನಪಳ್ಳದ ರಾಮಣ್ಣ ನಾಯ್ಕ್ ಎಂಬರಿಗೆ ಮೊದಲ ಮನೆ ನಿರ್ಮಿಸಿ ಹಸ್ತಾಂತರಿಸಲಾಗಿತ್ತು. ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ಬೆಳಕು ತಂಡದ ಸದಸ್ಯರಾದ ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ, ಶರೀಫ್ ಜಟ್ಟಿಪಳ್ಳ, ಹಾಗು ಇಲ್ಯಾಸ್ ಅವರನ್ನು ಎಸ್‍ಎಸ್‍ಎಫ್ ಮತ್ತು ಎಸ್‍ವೈಎಸ್ ವತಿಯಿಂದ ಸನ್ಮಾನಿಸಲಾಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಸ್‍ಕೆಎಸ್‍ಎಸ್‍ಎಫ್ ವಿಖಾಯ, ಯುವ ಬ್ರಿಗೇಡ್, ಎಸ್‍ಎಸ್‍ಎಫ್, ಎಸ್‍ವೈಎಸ್ ತಂಡವನ್ನು ಗೌರವಿಸಲಾಯಿತು.

Advertisement

ಸರಕಾರಿ  ಆಸ್ಪತ್ರೆಯಲ್ಲಿ ರಕ್ತನಿಧಿ:

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರಕ್ತನಿಧಿ ಮಂಜೂರಾಗಿದೆ. ಶೀಘ್ರದಲ್ಲಿಯೇ ಅನುಷ್ಠಾನವಾಗಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಎಸ್‍ಎಸ್‍ಎಫ್, ಎಸ್‍ವೈಎಸ್ ಸಂಘಟನೆಯವರು ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಬೇಕು ಎಂದು ಶಾಸಕರಿಗೆ ಮತ್ತು ತಹಶೀಲ್ದಾರ್‍ರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಗಾರರು ರಕ್ತನಿಧಿ ಮಂಜೂರುಗೊಂಡಿದೆ ಎಂದು ತಿಳಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror