ಪ್ರತಿಯೊಬ್ಬರ ಮನೆ ಮಗುವೇ ಆಗಿರುವ ಶ್ರೀಕೃಷ್ಣನ ಜನುಮದಿನ ಇಂದು…

August 23, 2019
9:52 AM

ಶ್ರೀಕೃಷ್ಣ ಜನ್ಮಾಷ್ಟಮಿ. ಈಗಂತೂ ಶುಭಾಶಯಗಳು ವೇಗ ಹೆಚ್ಚಿದೆ. ಶ್ರೀಕೃಷ್ಣನ ಆದರ್ಶ, ಧರ್ಮ ಸ್ಥಾಪನೆಗೆ ಪ್ರಯತ್ನ ಇತ್ಯಾದಿಗಳು ಶುಭಾಶಯದ ಭಾಗ. ಇಂದಿನ ಪರಿಸ್ಥಿತಿಯಲ್ಲಿ ಧರ್ಮದ ತಳಹದಿಯಲ್ಲಿ  ಏನೇ ಕೆಲಸ ಮಾಡಿದರೂ ಬೆಳಕು ಕಾಣದು ಎಂಬುದೂ ಸತ್ಯದ ಮಾತು. ಹಾಗಿದ್ದರೂ  ಧರ್ಮ ಸ್ಥಾಪನೆಗೆ ಅವತರಿಸಿ ಬಂದ ಪರಮಾತ್ಮನ ಬಗ್ಗೆ ಒಂಚೂರು ನೆನಪು ಮಾಡಬೇಕು …

Advertisement
Advertisement
Advertisement

ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ ಶ್ರೀಕೃಷ್ಣಜನ್ಮಾಷ್ಟಮಿ. ಕೆಲವು ಕಡೆ ವಾರಗಟ್ಟಲೆ ಈ ಹಬ್ಬ ಆಚರಣೆಯಲ್ಲಿರುತ್ತದೆ. ಹಬ್ಬವೆಂದರೆ ಆಡಂಬರ, ಗೌಜಿ ಗದ್ದಲಗಳಲ್ಲ ಅದು ಅರ್ಥಪೂರ್ಣ, ಧರ್ಮದ ಉಳಿವಿಗೆ, ಧರ್ಮದ ಆಚರಣೆಯ, ಪರಧರ್ಮ ಸಹಿಷ್ಣುತೆಯ ಆಚರಣೆ. ಎಲ್ಲರೂ ನಮ್ಮವರೇ ಎಂಬ ಭಾವ ಹೆಚ್ಚಿಸುವ ದಿನ.  ಹೀಗಾಗಿ ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

Advertisement

ಶ್ರಾವಣ ಮಾಸದಲ್ಲಿ ಬರುವ ಕೃಷ್ಣಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮ ಸ್ಥಳ. ತಂದೆ ವಸುದೇವ. ತಾಯಿ ದೇವಕಿ. ಯಶೋಧೆ ಅವನನ್ನು ಸಾಕಿ ಬೆಳೆಸಿದ ತಾಯಿ. ಮಥುರಾ  ಉತ್ತರಪ್ರದೇಶದ ಒಂದು ಜಿಲ್ಲೆ. ಅಂದು  ಯಾದವ ಕುಲದ ರಾಜಧಾನಿಯಾಗಿತ್ತು ಅದು.

Advertisement

 

ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿ ಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಪ್ರತಿಯೊಬ್ಬರ ಮನೆ ಮಗುವೇ ಆಗಿರುವ ಶ್ರೀಕೃಷ್ಣನ ಜನುಮದಿನ ಶ್ರೀಕೃಷ್ಣ ಜನ್ಮಾಷ್ಟಮಿ. ಹೀಗಾಗಿ ಸಡಗರ, ಸಂಭ್ರಮ. ಶ್ರೀಕೃಷ್ಣ ಸದಾ ಹೊಂದಿರುವುದು ಕೊಳಲು, ನವಿಲುಗರಿ. ನವಿಲುಗರಿ ಶಾಂತಿ ಸಮಯದಲ್ಲಾದರೆ, ಧರ್ಮರಕ್ಷಣೆ ಸಮಯಲ್ಲಿ ಸುದರ್ಶನ ಚಕ್ರವಾಗಿದೆ.

Advertisement

ಭಾರತದ ವಿವಿಧ ಕಡೆಗಳಲ್ಲಿ ಶ್ರೀ ಕೃಷ್ಣನ ಜೀವಿತಕಾಲದಲ್ಲಿ ನಡೆದ ಘಟನೆಗಳನ್ನು ಬಿಂಬಿಸುವ ಪ್ರದರ್ಶನಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಗುತ್ತದೆ. ಸಣ್ಣ ಪುಟ್ಟ ಹುಡುಗರು ತಮ್ಮನ್ನು “ಗೋವಿಂದ” ಅಥವಾ “ಗೋಪಾಲ” ಎಂದು ಹೇಳಿಕೊಂಡು ರಸ್ತೆ ಬೀದಿಗಳಲ್ಲಿ ಓಡಾಡುತ್ತಾ ಮೊಸರು – ಹಾಲು ತುಂಬಿದ ಮಣ್ಣಿನ ಗಡಿಗೆಗಳನ್ನು ಒಡೆಯುವರು. ಈ ಮಣ್ಣಿನ ಗಡಿಗೆಗಳನ್ನು ಎತ್ತರದ ಕಟ್ಟಡಗಳ ನಡುವೆ ಕಟ್ಟಿದ ಹಗ್ಗಕ್ಕೆ ನೇತು ಬಿಟ್ಟಿರುವರು. ಹುಡುಗರು ಪಿರಮಿಡ್ ಆಕಾರಕ್ಕೆ ಒಬ್ಬರ ಮೇಲೊಬ್ಬರು ನಿಂತು ಬಾಲಕೃಷ್ಣನು ಮಡಿಕೆಯನ್ನು ಮುಟ್ಟಿದ ರೀತಿಯಲ್ಲಿ ಮುಟ್ಟಿ ಒಡೆಯುವರು. ಮಡಿಕೆಗೆ ಕಾಣಿಕೆ ಹಣವನ್ನು ಕಟ್ಟಿರಲಾಗಿರುವುದರಿಂದ ಗೋವಿಂದನಂತೆ ವೇಷ ಧರಿಸಿದ ಹುಡುಗರು ಮಡಿಕೆಯನ್ನು ಒಡೆದು, ಆ ಹಣವನ್ನು ತಮ್ಮಲ್ಲಿ ಹಂಚಿಕೊಳ್ಳುವರು. ಇನ್ನು ಕೆಲವೆಡೆಗಳಲ್ಲಿ ಕಂಬವೊಂದರ ತುದಿಗೆ ಮಡಿಕೆಯನ್ನು ಕಟ್ಟಿದ್ದು, ಆ ಕಂಬಕ್ಕೆ ಎಣ್ಣೆಯನ್ನು ಸವರಿರಲಾಗುತ್ತದೆ. ಹುಡುಗರು ಮಡಿಕೆಯನ್ನು ಮುಟ್ಟಲು ಯತ್ನಿಸುತ್ತಿರುವಾಗ ಆ ಕೆಲಸ ಕಷ್ಟಕರವಾಗಲೆಂದು ಪ್ರೇಕ್ಷಕರು ಅವರ ಮೇಲೆ ನೀರೆರಚುವರು. ಈ ವಿನೋದದಿಂದ ಎಲ್ಲರೂ ಸಂತೋಷಗೊಳ್ಳುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ
ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್
January 23, 2025
10:39 AM
by: The Rural Mirror ಸುದ್ದಿಜಾಲ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror