ಪ್ರವಾಹ ಪರಿಹಾರ- ರಾಜ್ಯಕ್ಕೆ 1869.85 ಕೋಟಿ ರೂ ಬಿಡುಗಡೆ ಮಾಡಿದ ಕೇಂದ್ರ ಸರಕಾರ

January 6, 2020
7:33 PM

ನವದೆಹಲಿ: ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದ ರಾಜ್ಯಕ್ಕೆ ಕೇಂದ್ರ ಸರಕಾರ ಎರಡನೆಯ ಕಂತಿನ ಪರಿಹಾರ ಬಿಡುಗಡೆ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ  ಏಳು ರಾಜ್ಯಗಳಿಗೆ 5,908 ಕೋಟಿ ರೂ ಅಧಿಕ ಅತಿವೃಷ್ಟಿ ಪರಿಹಾರ ನೀಡಲು ಅನುಮತಿ ನೀಡಲಾಗಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅತಿವೃಷ್ಟಿಯಿಂದ ಉಂಟಾದ ನಷ್ಟಕ್ಕೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ ಎಂದು ತಿಳಿಸಿದ್ದರು.

ಅತಿವೃಷ್ಟಿಯಿಂದ ತೀವ್ರ ಹಾನಿ ಅನುಭವಿಸಿರುವ ಕರ್ನಾಟಕದ ಪ್ರವಾಹ ಪರಿಹಾರ ನಿಧಿಗೆ ಎರಡನೆಯ ಹಂತದಲ್ಲಿ 1869.85 ಕೋಟಿ ರೂ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ರಾಜ್ಯ ಹೆಚ್ಚಿನ ಪರಿಹಾರ ಕೋರಿದ್ದರೂ ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಬಿಡುಗಡೆ ಮಾಡಿತ್ತು.

ಮಧ್ಯಪ್ರದೇಶಕ್ಕೆ 1749.73 ಕೋಟಿ ರೂ., ಮಹಾರಾಷ್ಟ್ರಕ್ಕೆ 956.93 ಕೋಟಿ ರೂ., ಅಸ್ಸಾಂಗೆ 616.63 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 284.93 ಕೋಟಿ ರೂ, ತ್ರಿಪುರಾಕ್ಕೆ 63.32 ಕೋಟಿ ರೂ ಮತ್ತು ಉತ್ತರ ಪ್ರದೇಶಕ್ಕೆ 367.17 ಕೋಟಿ ರೂ. ಪ್ರವಾಹ ಪರಿಹಾರ ನಿಧಿಗೆ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. 35 ಸಾವಿರ ಕೋಟಿಗೂ ಅಧಿಕ ನಷ್ಟ ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಮಳೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಆಸ್ತಿಪಾಸ್ತಿ ಕಳೆದುಕೊಂಡಿದ್ದರು. ಅತಿವೃಷ್ಟಿಯಿಂದಾಗಿ 35 ಸಾವಿರ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror