ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20 ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ 9500 ರೂಪಾಯಿ ದಂಡ ವಿಧಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel