ನವದೆಹಲಿ : ಒಡಿಸ್ಸಾದ ಸಮುದ್ರ ತೀರ ಪ್ರದೇಶಕ್ಕೆ ಗುರುವಾರ ಬೆಳಗ್ಗೆ ಅಪ್ಪಳಿಸಿದ ಫೋನಿ ಚಂಡಮಾರುತ ಕೋಲಾಹಲ ಸೃಷ್ಠಿಸಿದೆ. ಶುಕ್ರವಾರ ಸಂಜೆಯ ವೇಳೆ ಒಟ್ಟು 5 ಮಂದಿ ಫೋನಿ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಗ್ಗೆ ಪ್ರತಿ ಗಂಟೆಗೆ 200 ಕಿ. ಮೀ ವೇಗದಲ್ಲಿ ಪುರಿ ಪ್ರದೇಶದ ಕಡಲ ತೀರಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ಮಧ್ಯಾಹ್ನದವರೆಗೂ ಒಡಿಶಾ ಕರಾವಳಿ ತೀರದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯನ್ನು ಸುರಿಸಿತು. ನಂತರ ಇದೀಗ ಚಂಡಮಾರುತ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ. ಸದ್ಯ ಪ್ರತೀ ಗಂಟೆಗೆ 150-160 ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಸದ್ಯ ಗಂಟೆಗೆ 80 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಾ ಈಶಾನ್ಯದತ್ತ ಚಂಡ ಮಾರುತದ ಪ್ರಭಾವ ಸಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಪೀಡಿತ ರಾಜ್ಯಗಳಿಗೆ ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel