ಬಜರಂಗದಳಕ್ಕೆ ಪಿಎಫ್‌ಐ ಹೋಲಿಕೆ – ಖರ್ಗೆಗೆ ಕೋರ್ಟ್ ಸಮನ್ಸ್

May 15, 2023
4:49 PM

ಬಜರಂಗದಳದ  ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‌ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ  ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

Advertisement

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್‌ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group