ಬಸವನಮೂಲೆ ದೇವಳದಲ್ಲಿ ಉಚಿತ ಸಂಸ್ಕಾರ ಶಿಬಿರ

May 8, 2019
9:00 AM

ಸುಬ್ರಹ್ಮಣ್ಯ: ಬದುಕಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃ ತ ಜೀವನ ಪ್ರಾಪ್ತವಾಗುತ್ತದೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲಿ ನಾವು ನಡೆದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೇಳಿದರು.

Advertisement
Advertisement

ಅವರು  ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ  ನಡೆದ ಸಂಸ್ಕಾರ ಶಿಬಿರ ಉದ್ಘಾಟಿಸಿ  ಮಾತನಾಡಿದರು. ಉಪನಿಷತ್ ಮೊದಲಾದ ಗ್ರಂಥಗಳನ್ನು ಎಲ್ಲರಿಗೂ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೂ ಅವುಗಳ ಸಾರವನ್ನು ಅಳವಡಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದರೆ ಸುಗಮ ಜೀವನ ಸಾಧ್ಯ ಎಂದರು.

ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಬಸವೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್, ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡೆತ್ತಾಯ ಮುಖ್ಯಅತಿಥಿಗಳಾಗಿದ್ದರು. ಶಿಬಿರದ ಸಂಚಾಲಕ ಎಂ.ಕೃಷ್ಣ.ಭಟ್, ಕಾರ್ಯದರ್ಶಿ ಸತ್ಯಶಂಕರ ಭಟ್, ಪ್ರಭಾಕರ ಪಡ್ರೆ ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group