ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ : ವಿದ್ಯಾರ್ಥಿಗಳಿಗೆ ನೆರವು

October 20, 2019
7:12 PM

ಮಡಿಕೇರಿ: ಬ್ರಹ್ಮಶ್ರೀ ನಾರಾಯಣಗುರುಗಳ ದಿವ್ಯ ಸಂದೇಶದಿಂದಾಗಿ ಸಮಾಜದಲ್ಲಿ ಅನೇಕ ಬದಲಾವಣೆಗಳಾಗಿವೆ. `ಶಿಕ್ಷಣದಲ್ಲಿ ಸ್ವತಂತ್ರ್ಯರಾಗಿ, ಸಂಘಟನೆಯಿಂದ ಬಲಿಷ್ಠರಾಗಿ’ ಎನ್ನುವ ಅವರ ಸಂದೇಶವನ್ನು ಎಲ್ಲರು ಪಾಲಿಸುವಂತಾಗಬೇಕು ಎಂದು ಮಂಗಳೂರಿನ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಕರೆ ನೀಡಿದ್ದಾರೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಡಿಕೇರಿಯ ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ ಹಾಗೂ ನಾರಾಯಣ ಗುರು ಜಯಂತೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Advertisement
Advertisement
Advertisement

ಸಮಾಜದ ಉನ್ನತಿಗೆ ಶಿಕ್ಷಣ ಅತ್ಯವಶ್ಯಕವಾಗಿದ್ದು, ಮಕ್ಕಳ ವಿದ್ಯಾಭ್ಯಾಸದ ಭದ್ರ ಅಡಿಪಾಯಕ್ಕೆ ಸಂಘಟನೆ ನೆರವಾಗಬೇಕು ಎಂದು ಹೇಳಿದರು. 150 ವರ್ಷಗಳ ಹಿಂದೆ ಜಾತಿ ಪದ್ಧತಿಯಿಂದಾಗಿ ಬಿಲ್ಲವ ಸಮಾಜದ ಜನರು ಶೋಷಣೆಗೆ ಒಳಗಾಗಿದ್ದರು. ನಾರಾಯಣ ಗುರುಗಳು ಸಮಾಜದಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದ್ದಾರೆ. ಅವರ ಆದರ್ಶ ಗುಣಗಳನ್ನು, ತತ್ವ ಸಿದ್ಧಾಂತಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು. ರಾಜ್ಯದ ಹಲವೆಡೆ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಮಕ್ಕಳನ್ನು ಸಂಘ ಸಂಸ್ಥೆಗಳು ಗುರುತಿಸಿ ಅವರ ಶಿಕ್ಷಣಕ್ಕೆ ನೆರವಾಗಬೇಕು ಎಂದು ನವೀನ್ ಚಂದ್ರ ಹೇಳಿದರು.

Advertisement

ಮಂಗಳೂರಿನ ಬಿಲ್ಲವರ ಮಹಿಳಾ ಯೂನಿಯನ್ ಅಧ್ಯಕ್ಷೆ ಎನ್.ಸುಮಲತಾ ಸುವರ್ಣ `ಸಮಾಜ ಸೇವಾ ಸಂಘಗಳನ್ನು ಕಟ್ಟುವುದು ಮಾತ್ರ ಅಲ್ಲದೆ ಸಮುದಾಯ ಬಾಂಧವರ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆ ಸಾಧಿಸುವ ಹೊಣೆಗಾರಿಕೆಯನ್ನು ಸಂಘಟನೆಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಚಿಂತನೆ ನಡೆಸಬೇಕು. ಉನ್ನತ ಶಿಕ್ಷಣ, ಉನ್ನತ ಹುದ್ದೆಯನ್ನು ಜನಾಂಗದ ಬಾಂಧವರು ಅಲಂಕರಿಸಬೇಕು ಎಂದು ಸಲಹೆ ನೀಡಿದರು.

ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಬಿ.ಎಸ್.ಲೀಲಾವತಿ ಮಾತನಾಡಿ, ಜಿಲ್ಲೆಯಲ್ಲಿ ಬಿಲ್ಲವ ಸಮಾಜ ಬಾಂಧವರು ಸುಮಾರು 2 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರಲ್ಲಿ ಸಾಕಷ್ಟು ಮಂದಿ ಆರ್ಥಿಕವಾಗಿ ಸಬಲತೆಯನ್ನು ಕಾಣದವರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಘಟನೆಯಲ್ಲಿ ಸಮುದಾಯದ ಮುಖಂಡರು ತೆಗೆದುಕೊಳ್ಳುವ ನಿರ್ಣಯಗಳು ಸಮುದಾಯದ ಕಟ್ಟ ಕಡೆಯ ವ್ಯಕಿಗೂ ಮುಟ್ಟುವಂತಿರಬೇಕು ಎಂದು ತಿಳಿಸಿದರು.

Advertisement

ಇದೇ ಸಂದರ್ಭ ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಅಖಿಲ ಭಾರತ ಬಿಲ್ಲವರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಿಸಲಾಯಿತು ಮತ್ತು ವಿದ್ಯಾರ್ಥಿವೇತನ ನೀಡಲಾಯಿತು.
ಕುಶಾಲನಗರ ಸುವರ್ಣ ಕಾಫಿ ವಕ್ರ್ಸ್‍ನ ಉದ್ಯಮಿ ಬಿ.ಎನ್.ರಮೇಶ್, ತಾ.ಪಂ ಸದಸ್ಯ ಅಪ್ರು ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror