ಬಿಳಿನೆಲೆ : ಸ್ವಯಂಪ್ರೇರಿತ ಸ್ವಚ್ಚತಾ ಸೇವೆಯಿಂದ ಆರೋಗ್ಯ ಪೂರ್ಣ ಪರಿಸರ ನಿರ್ಮಾಣವಾಗುತ್ತದೆ.ಇದರಿಂದ ಭವಿಷ್ಯದ ಜೀವನವು ಸುಗಮವಾಗಲು ಸಾಧ್ಯ ಎಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಶರ್ಮ ಹೇಳಿದರು.
Advertisement
ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯ ಸುಳ್ಯ ಹಾಗೂ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಸ್ವಚ್ಚತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Advertisement
ಕೆಜಿವಿ ಕಾಲೇಜಿನ ವಸಂತ ಕುಮಾರ್, ಗೋಪಾಲಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಣ ಶಿವರಾಮ ಯೇನೆಕಲ್ ಮುಖ್ಯಅತಿಥಿಗಳಾಗಿದ್ದರು.ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಎಚ್.ಎಸ್, ಉಪನ್ಯಾಸಕ ಕೌಶಿಕ್ ವೇದಿಕೆಯಲ್ಲಿದ್ದರು.
ಸಮಾರಂಭದ ಬಳಿಕ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಶಾಲಾ ಆವರಣ, ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತಾ ಸೇವೆ ನೆರವೇರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement