ಬೆಳಂದೂರು : ನೆರೆಹೊರೆ ಯುವ ಸಂಸತ್ತು ಕಾರ್ಯಗಾರ

June 24, 2019
9:07 PM

ಸವಣೂರು: ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಾಮಾಜಿಕವಾಗಿ ಬೆಳೆಯಲು ಸಾಧ್ಯ.ಯುವ ಜನತೆಯ ಅಭ್ಯುದಯಕ್ಕಾಗಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮೂಲಕ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ವಿದ್ಯಾವಂತ ಯುವಜನತೆ ಸ್ವಹಿತಾಸಕ್ತಿಗಾಗಿ ಬದುಕು ಸೀಮಿತಗೊಳಿಸದೇ ದೇಶದ ಆಗುಹೋಗುಗಳತ್ತ ಗಮನ ಹರಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಬಿ.ಎಸ್ ಹೇಳಿದರು.

Advertisement
Advertisement
Advertisement
Advertisement

ಅವರು ಸೋಮವಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಯುವ ಚೇತನಾ ಸೇವಾ ಸಂಘ ಪುಣ್ಚಪ್ಪಾಡಿ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಹಾಗೂ ಬೆಳಂದೂರು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತ ಮಾಹಿತಿ ಕಾರ್ಯಗಾರ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ ಅಂಚೆ ಪಾಲಕ ಸೀತಾರಾಮ ಗೌಡ ಮುಂಡಾಳ ಮಾತನಾಡಿ,ಯುವಜನತೆ ಈ ದೇಶದ ಆಸ್ತಿ ಮತ್ತು ಆಧಾರ ಸ್ತಂಭಗಳು. ಅವರು ವಿದ್ಯೆ ಕಲಿತು ಉತ್ತಮ ನಾಗರಿಕರಾದರೆ ರಾಷ್ಟ್ರದ ಭವಿಷ್ಯ ಉಜ್ವಲವಾಗುತ್ತದೆ. ಯುವಜನತೆ ಸಮಾಜದಲ್ಲಿರುವ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಂತಹ ಪಿಡುಗುಗಳ ನಿವಾರಣೆಗೆ ಮುಂದಾಗಬೇಕು ಎಂದರು.
ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು ಮಾತನಾಡಿ,ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸುವುದರ ಮೂಲಕ ತಮ್ಮ ಬೆಳವಣಿಗೆ ಹೊಂದಲು ಸಾಧ್ಯ ಎಂದರು.
ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಪದ್ಮನಾಭ ಕೆ ಅಧ್ಯಕ್ಷತೆ ವಹಿಸಿದ್ದರು. ಕೌಶಲಾಭ್ಯವೃದ್ಧಿ ಮತ್ತು ಸೃಜನ ಶೀಲತೆ ಕುರಿತಾಗಿ ಮಂಗಳೂರಿನ ಮುಕುಂದರಾಜ್ ಕಾರ್‍ಸ್ಟ್ರೀಟ್ ಅವರು, ಅಂಚೆ ಇಲಾಖೆ ಕಾರ್ಯ ನಿರ್ವಹಣೆ ಹಾಗೂ ಸುಕನ್ಯಾ ಸಮೃದ್ದಿ ಯೋಜನೆಯ ಕುರಿತು ನಿವೃತ ಅಂಚೆ ಪಾಲಕ ಸೀತಾರಾಮ ಗೌಡ , ಸ್ವಚ್ಚ ಭಾರತ್ ಹಾಗೂ ಯೋಗ ,ವ್ಯಕ್ತಿತ್ವ ವಿಕಸನ ,ನೈತಿಕ ಮೌಲ್ಯ ಕುರಿತಾಗಿ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡಿದರು.

Advertisement

ಕಾರ್ಯಕ್ರಮ ಸಂಯೋಜಕ ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು.ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಪ್ರಸ್ತಾವನೆಗೈದರು.ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು. ಮಾಜಿ ಅಧ್ಯಕ್ಷ ದಯಾನಂದ ಮೆದು ಸಹಕರಿಸಿದರು. ಬೆಳಂದೂರು ಕಾಲೇಜಿನ ಉಪನ್ಯಾಸಕ ಸ್ವಾಮಿ ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror