ಬೆಳಗಾವಿ ಯುವಜನೋತ್ಸವ: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಬಹುಮಾನ

November 24, 2019
10:18 AM

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಯುವಜನೋತ್ಸವ ಇನ್‍ಸಿಗ್ನಿಯ-2019ರಲ್ಲಿ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಪಡೆದು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

Advertisement
Advertisement
Advertisement
Advertisement

ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಮೇಳದಲ್ಲಿ ಭರತನಾಟ್ಯ ವೈಯಕ್ತಿಕ ವಿಭಾಗದಲ್ಲಿ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿನಿ ಶಮಾ ಪ್ರಣಮ್ಯ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಜಾನಪದ/ಬುಡಕಟ್ಟು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಮಿಟ್ಸು ಜಾಸ್ಮಿನ್ ಅಂದ್ರಾದೆ, ಅಪೂರ್ವ.ಪಿ, ಶ್ರೀಪಂಚಮಿ.ಎನ್, ಶ್ರದ್ದಾ.ಬಿ.ಡಿ, ಧರಿತ್ರಿ, ವಿಶ್ವಾಸ್.ಎಂ.ಎಸ್, ವಿನೀತ್.ಜೆ.ವಿ, ಹಿತೇಶ್.ಪಿ, ಭಾಗ್ಯರಾಜ್.ಬಿ.ಕೆ ಮತ್ತು ಯು.ಅಭಿಷೇಕ್ ನಾಯಕ್ ಇವರ ತಂಡವು ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಲತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು.

Advertisement

ರಾಜ್ಯಾದ್ಯಂತ ಒಟ್ಟು 90 ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |
January 26, 2025
7:35 AM
by: The Rural Mirror ಸುದ್ದಿಜಾಲ
ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ
January 26, 2025
7:14 AM
by: The Rural Mirror ಸುದ್ದಿಜಾಲ
ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಭಾರತಕ್ಕೆ ಹುರಿದ ಅಡಿಕೆ ಆಮದು | ತಕ್ಷಣವೇ ಕ್ರಮ ಕೈಗೊಳ್ಳಲು ಕ್ಯಾಂಪ್ಕೊ ಒತ್ತಾಯ|
January 25, 2025
10:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror