ಬೆಳೆಸಾಲದ ಗೊಂದಲ ನಿವಾರಣೆಗೆ ಕ್ರಮ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಬದ್ಧ | ಸಹಕಾರ ಭಾರತೀ ನಿಯೋಗಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ |

April 28, 2020
9:04 PM

ಮಂಗಳೂರು: ಬೆಳೆಸಾಲದ ಗೊಂದಲ ನಿವಾರಣೆಗೆ ಸರಕಾರ ತಕ್ಷಣವೇ ಕ್ರಮ ಕೈಗೊಳ್ಳಲಿದ್ದು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹಕಾರಿ ಭಾರತೀ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಇದೇ ವೇಳೆ ಅಡಿಕೆ ಬೆಳೆಗಾರರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಲ್ಲಾ ಕೃಷಿಕರ ಪರ ಸರಕಾರ ಇದೆ ಯಾವುದೇ ಸಮಸ್ಯೆಯಾದಾಗ ತಿಳಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ನಿಯೋಗಕ್ಕೆ ಭರವಸೆ ನೀಡಿದ್ದಾರೆ.

Advertisement

ಸಹಕಾರಿ ಭಾರತೀ ರಾಜ್ಯಾಧ್ಯಕ್ಷ , ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೆಳೆ ಸಾಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂದಿರುವ ಆದೇಶದ ಪ್ರಕಾರ ಒಂದು ರೇಶನ್ ಕಾರ್ಡ್ ಮೂಲಕ ಒಬ್ಬ ಕೃಷಿಕನಿಗೆ ಮಾತ್ರವೇ ಬೆಳೆಸಾಲ ಸೇರಿದಂತೆ ಇತರ ಗೊಂದಲಗಳು ಇದ್ದವು. ಇದನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯ ಮಾಡಿದರು. ತಕ್ಷಣವೇ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್  ಜೊತೆ ಮಾತುಕತೆ ನಡೆಸಿ ವಾರದೊಳಗೆ  ಗೊಂದಲ ನಿವಾರಣೆ ಮಾಡುವಂತೆ ಸೂಚಿಸಿದರು.

ಇದೇ ಸಂದರ್ಭ ಅಡಿಕೆ ಬೆಳೆಗಾರರ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದ ಎಲ್ಲಾ ಕೃಷಿಕರ ಪರ ಸರಕಾರ ಇದೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾದರೆ ತಕ್ಷಣವೇ ಸರಕಾರದ ಗಮನಕ್ಕೆ ತರಲು ತಿಳಿಸಿದರು.

Advertisement

ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು , ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೊದಲಾದವರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror