ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆ ಸಭೆ

November 8, 2019
5:29 PM

ಬೆಳ್ಳಾರೆ: ಮುಂಬರುತ್ತಿರುವ ಈದ್ ಮಿಲಾದ್, ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆಯ ವಿಶೇಷ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

Advertisement

ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಈರಯ್ಯ.ಡಿ.ಎನ್ ಅವರು ಮಾಹಿತಿ ನೀಡುತ್ತಾ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಬಾರದು. ಈದ್ ಮಿಲಾದ್ ಜಾಥದಲ್ಲಿ ಅನುಮತಿ ಪಡೆದು ಕಾಲ್ನಡಿಗೆ ಜಾಥಾ ನಡೆಸಬಹುದು. ವಾಹನದ ಜಾಥಕ್ಕೆ ಅವಕಾಶವಿರುವುದಿಲ್ಲ ಎಂದರು.  ಬಳಿಕ ಸಾರ್ವಜನಿಕ ಹಿತಾಸಕ್ತಿ ಹಾಗು ಸಮಾಜದಲ್ಲಿ ಶಾಂತಿ ಹಾಗು ಸುವ್ಯವಸ್ಥೆ ಕುರಿತು ಮಾತನಾಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿರುವುದರಿಂದ ಸಾರ್ವಜನಿಕವಾಗಿ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಯೋಧ್ಯೆ ತೀರ್ಪು ಬಂದಾಗ ಯಾರ ಪರವಾಗಿದ್ದರೂ ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಪರವಾಗಿ ತೀರ್ಪು ಬಂದಾಗ ಸಾರ್ವಜನಿಕವಾಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದು, ವಾಹನ ಜಾಥಾ ನಡೆಸುವುದು ಮಾಡಕೂಡದು. ಅಂಥಹ ತೊಂದರೆಗಳಾದಾಗ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಅಯೋಧ್ಯೆ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೆಸ್‍ಬುಕ್‍ಗಳಲ್ಲಿ ಪೋಸ್ಟ್ ಗಳನ್ನು ರವಾನಿಸುವುದಾಗಲಿ ಅಥವಾ ಫಾರ್ವಡ್ ಮಾಡುವುದಾಗಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ದೇವಸ್ಥಾನಗಳ, ಚರ್ಚ್‍ಗಳ ಹಾಗೂ ಮಸೀದಿಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿಗಳು ಸಹಕರಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror