ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು : ಕೆಳ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ

September 10, 2019
8:30 AM

ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.

ಈ ಬಗ್ಗೆ  ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror