ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಕಾಂಕ್ಷಿ ಅಲ್ಲ- ಎಂ.ವೆಂಕಪ್ಪ ಗೌಡ

June 20, 2019
2:27 PM

 

Advertisement

ಸುಳ್ಯ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕರ್ತವ್ಯ ನಿರ್ವಹಿಸಿದಾಗ ಆರು ಬ್ಲಾಕ್ ಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಕೆಪಿಸಿಸಿ ಕಾರ್ಯದರ್ಶಿಯಂತಹಾ ಹುದ್ದೆಯನ್ನು ನಿರ್ವಹಿಸಿ ಮತ್ತೆ ಬ್ಲಾಕ್ ಕಾಂಗ್ರೆಸ್ ಹುದ್ದೆಯನ್ನು ವಹಿಸಿಕೊಳ್ಳುವುದಿಲ್ಲ. ಈಗಿನ ಅಧ್ಯಕ್ಷರು ನೀಡಿದ ರಾಜಿನಾಮೆ ಅಂಗೀಕಾರ ಆದರೆ ಹೈಕಮಾಂಡ್ ಸೂಕ್ತ ಅಭ್ಯರ್ಥಿಯನ್ನು ಅಧ್ಯಕ್ಷಾರನ್ನಾಗಿ ನೇಮಕ ಮಾಡಬಹುದು. ನಮ್ಮಲ್ಲಿ ಸಾಕಷ್ಟು ಮಂದಿ ಅರ್ಹರು ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ರಾಜಿನಾಮೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಕಾಂಗ್ರೆಸ್ ನ ಸಭೆಯಲ್ಲಿ ಉಂಟಾದ ಭಿನ್ನಮತದ ಬಗ್ಗೆ ಹೊರಗೆ ಮಾತನಾಡುವುದಿಲ್ಲ. ಅಂತಹಾ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚೆ ‌ಮಾಡುತ್ತೇವೆ. ಸಾಂದರ್ಭಿಕ ಕಾರಣಗಳಿಂದ ಸಭೆಯಲ್ಲಿ ಚರ್ಚೆ ನಡೆದಿದೆಯೇ ಹೊರತು ಭಿನ್ನಮತ ಕಾರಣ ಅಲ್ಲ ಎಂದು ಅವರು ಹೇಳಿದರು. ಕೆಪಿಸಿಸಿ ಪುನಾರಚನೆ ಸಂದರ್ಭ ಸುಳ್ಯದ ನಾಯಕರಿಗೆ ಸೂಕ್ತ ಸ್ಥಾನ ಮತ್ತೆ ದೊರಕುವ ವಿಶ್ವಾಸ ಇದೆ ಎಂದರು.

ಕೆಲಸ ಕಾಂಗ್ರೇಸ್ ನವರದ್ದು ಮತ ಬಿಜೆಪಿಗೆ:

ಅಂಗಡಿಮಜಲು ಸೇತುವೆ, ಅರಂಬೂರು ಸೇತುವೆ, ಬೆಂಡೋಡಿ ಸೇತುವೆ ಹೀಗೆ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ತರುವುದು ಕಾಂಗ್ರೆಸ್. ಆದರೆ ಇಲ್ಲೆಲ್ಲಾ ಜನ ಮತ ಹಾಕುವುದು ಮಾತ್ರ ಬಿಜೆಪಿಗೆ. ಕೆಲಸ ಮಾಡುವವರಿಗೆ ಜನ ಮತ ನೀಡುತ್ತಿಲ್ಲ ಎಂಬ ನೋವು ಇದೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶವು ನಗರ ಪಂಚಾಯತ್ ಚುನಾವಣೆ ಮೇಲೂ ಪರಿಣಾಮ ಬೀರಿ ಕಾಂಗ್ರೆಸ್ ಗೆ ಸೋಲುಂಟಾಗಲು ಕಾರಣವಾಯಿತು ಎಂದು ಅವರು ಹೇಳಿದರು.

Advertisement

ಸುದ್ದಿ ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ, ಶರೀಫ್ ಕಂಠಿ, ಧೀರಾ ಕ್ರಾಸ್ತಾ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group