ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel