ಭಾರೀ ಮಳೆ : ರೈಲು ಹಳಿಗೆ 4 ಕಡೆ ಮಣ್ಣು ಕುಸಿತ : ರೈಲು ಸಂಚಾರ ಸ್ಥಗಿತ

August 6, 2019
3:40 PM

ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ  ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ  ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror