ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆಯಂತೆ….!

September 19, 2019
9:34 AM

ಕಳೆದ ಹಲವಾರು ಸಮಯಗಳಿಂದ ಚರ್ಚೆಯಲ್ಲಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಮುಗಿಯಲಿದೆ ಎಂಬ ಸುದ್ದಿ ಬಂದಿದೆ. ಆದಷ್ಟು ಶೀಘ್ರದಲ್ಲೇ ಈ ಸೇತುವೆ ಕೆಲಸ ಮುಗಿಯಲಿ ಎಂಬ ಆಶಯದೊಂದಿಗೆ…

Advertisement

ಕಳೆದ ಕೆಲ ವರ್ಷಗಳಿಂದ  ಗಡುವುಗಳ ಮೇಲೆ ಗಡುವು ಮುಗಿದಿ  ಇದೀಗ ಮತ್ತೆ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಬಗ್ಗೆ ಸೂಚನೆಯನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಈ ಬಾರಿ ಪಕ್ಕಾ ಪಂಪ್ ವೆಲ್ ಮೇಲ್ಸೇತುವೆ ಫಿನಿಶ್ ಆಗಲಿದೆ. ಟೀಕೆ, ಟಿಪ್ಪಣಿ ಜತೆಗೆ ಅಪಹಾಸ್ಯಕ್ಕೆ ಗುರಿಯಾಗಿದ್ದ “ಈ ಸೇತುವೆ ಕಾಮಗಾರಿ ಈ ಬಾರಿ ನಿಶ್ಚಿತವಾಗಿಯೂ ಮುಗಿಯುತ್ತದೆ.!”  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮತ್ತೊಂದು ಅಂತಿಮ ಗಡುವಿನ ಭರವಸೆ 2020ರ ಜನವರಿಯಿಂದಲಾದರೂ ಸಾರ್ವಜನಿಕರಿಗೆ ಮುಕ್ತಗೊಳ್ಳುವ ನಿರೀಕ್ಷೆ ಮೂಡಿಸಿದೆ.

ಪಂಪ್‌ವೆಲ್ ಮೇಲ್ಸೇತುವೆಯು ಒಟ್ಟು 600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷದಲ್ಲಿ ತೀವ್ರ ನಿಧಾನಗತಿಯಲ್ಲಿ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ವೇಗ ಪಡೆದಿತ್ತು. ಕಳೆದ ಬಾರಿಯ ಮಳೆಗಾಲದಲ್ಲಿ ಕಾಮಗಾರಿ ಮತ್ತೆ ಕುಂಟುತ್ತಾ ಸಾಗಿತ್ತು. ಹಾಗಿದ್ದರೂ 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ರವರು ನವಯುಗ್ ಸಂಸ್ಥೆಗೆ ಒತ್ತಡ ಹೇರಿದ್ದರು. ಫೆಬ್ರವರಿಯಲ್ಲಿ ಪಂಪ್‌ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ನವಯುಗ್ ಸಂಸ್ಥೆಯವರು ಈ ಹಿಂದೆಯೇ ಅನೇಕ ಬಾರಿ ಗಡುವು ನೀಡಿದ್ದರೂ, ಆ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್‌ರವರು, ಕಳೆದ ಫೆಬ್ರವರಿ ಅಂತ್ಯಕ್ಕೆ ಈ ಗಡುವಿಗೆ ಪೂರ್ಣಗೊಳ್ಳದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದರು!

ಆದರೆ ಆ ಗಡುವು ಕೂಡಾ ಸಾಧ್ಯವಾಗಾದಾಗ ಕಳೆದ ಫೆಬ್ರವರಿ 28ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಕಾರ್ಯದರ್ಶಿ ವೈಭವ್ ದಾಂಗೆಯವರು ಮಂಗಳೂರಿಗೆ ಭೇಟಿ ನೀಡಿ ಸಂಸದರ ಜತೆ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದ್ದರು. 2019ರ ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಕೂಡಾ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಕಾಮಗಾರಿ ಮಾತ್ರ ಪೂರ್ಣಗೊಂಡಿರಲಿಲ್ಲ. ಆ ಬಳಿಕ ಜೂನ್‌ನಿಂದ ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತಗೊಂಡಿತ್ತು.

 

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ
July 3, 2025
11:38 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group