ಮಂಗಳೂರಿನಲ್ಲಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ

November 28, 2019
10:01 PM

ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.

ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror