ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವಿಶ್ವ ಯೋಗ ದಿನಾಚರಣೆ

June 21, 2019
8:27 PM

ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅಭಿಪ್ರಾಯಪಟ್ಟರು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಮತ್ತು ಕಳೆದ ಒಂದು ತಿಂಗಳಿನಿಂದ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಎಂಬುದು ಜೀವನಶೈಲಿ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡಾಗ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಗಟ್ಟಿಯಾಗಲು ಸಾಧ್ಯ. ನಮ್ಮ ನಿತ್ಯ ಒತ್ತಡ ಮತ್ತು ಜಂಜಾಟದಿಂದಾಗಿ ಆರೋಗ್ಯದ ಮೇಲೆ ಪರಿಣಾಮಗಳು ಬೀರುತ್ತಿವೆ. ಆದ್ದರಿಂದ ನಮ್ಮನ್ನು ನಾವು ಯೋಗದಲ್ಲಿ ತೊಡಗಿಸಿಕೊಂಡಾಗ ಇವೆಲ್ಲಕ್ಕೂ ಮುಕ್ತಿ ಕಾಣಿಸಲು ಸಾಧ್ಯ ಎಂದು ಲಕ್ಷ್ಮೀಪ್ರಸಾದ್ ಹೇಳಿದರು.
ಐಸಿರಿ ಹೆಲ್ದಿ ಇಂಡಿಯಾ ಮಿಷನ್ ಇದರ ದರ್ಶನ್ ಜೈನ್ ಮಾತನಾಡಿ, ಯೋಗ ಶಿಬಿರಗಳು ದಿನ ಲೆಕ್ಕಕ್ಕೆ ಸೀಮಿತವಾಗಬಾರದು. ಅದು ನಿರಂತರವಾಗಿರಬೇಕು. ಆ ದೃಷ್ಟಿಯಿಂದ ಐಸಿರಿ ಹೆಲ್ತ್ ಇಂಡಿಯಾ ವತಿಯಿಂದ ದಿನನಿತ್ಯ ಉಚಿತ ಯೋಗ ಕಾರ್ಯಕ್ರಮ ಆಯೋಜಿಸುವ ಚಿಂತನೆ ನಡೆಸಿದ್ದೇವೆ ಎಂದರು.
ಇದೇ ಸಂದರ್ಭ ಪತ್ರಕರ್ತರಿಗೆ ನಿರಂತರ ಒಂದು ತಿಂಗಳ ಕಾಲ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕಿ ಭವ್ಯಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಒಂದು ತಿಂಗಳ ಕಾಲ ಯೋಗ ತರಬೇತಿಯಲ್ಲಿ ಪಾಲ್ಗೊಂಡ ಪತ್ರಕರ್ತರಾದ ರಾಘವ ಎಂ ಮತ್ತು ಭಾಸ್ಕರ ರೈ ಕಟ್ಟ ಅನಿಸಿಕೆ ವ್ಯಕ್ತಪಡಿಸಿದರು.

Advertisement

ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಮೋಟುಕಾನ ಸ್ವಾಗತಿಸಿ, ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಡಿ ಪಳ್ಳಿ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror