ಮಂಜೇಶ್ವರ: ಅ.21ರಂದು ಉಪ ಚುನಾವಣೆ ನಡೆಯಲಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ್ ತಂತ್ರಿ ಪರವಾಗಿ ಶಾಸಕ ಎಸ್. ಅಂಗಾರ ಅ.18 ರಂದು ಚುನಾವಣಾ ಪ್ರಚಾರ ನಡೆಸಿದರು. ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಯಪದವು ಭಾಗದಲ್ಲಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜಾಲ್ಸೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಉದಯಕುಮಾರ್ ಆಚಾರ್, ಮಹೇಶ್ ಕುಮಾರ್ ಮೇನಾಲ, ಪ್ರದೀಪ್ ಅಡೂರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel