ಮಡಿಕೇರಿ, ಗೋಣಿಕೊಪ್ಪ ದಸರಾ ಬಂದೋಬಸ್ತ್ : 700 ಪೊಲೀಸರ ನಿಯೋಜನೆ : ಮದ್ಯ ಮಾರಾಟ ನಿಷೇಧ

October 6, 2019
10:24 AM

ಮಡಿಕೇರಿ :ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾದ ಬಂದೋಬಸ್ತ್‍ಗಾಗಿ 4 ಮಂದಿ ಡಿ.ವೈ.ಎಸ್.ಪಿಗಳ ನೇತೃತ್ವದಲ್ಲಿ ಒಟ್ಟು 700 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದ್ದು, ಶಾಂತಿಯುತ ದಸರಾ ಆಚರಣೆಗೆ ಕೊಡಗು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

Advertisement
Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಡಿಕೇರಿ ದಸರಾಕ್ಕೆ 60ರಿಂದ 80 ಸಾವಿರ ಮಂದಿ ಹಾಗೂ ಗೋಣಿಕೊಪ್ಪಕ್ಕೆ 15 ಸಾವಿರ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ದಶ ಮಂಟಪಗಳ ಶೋಭಾ ಯಾತ್ರೆ ತೆರಳುವ ಸಂದರ್ಭ ಜನ ದಟ್ಟಣೆ ಏರ್ಪಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಬಂದೋಬಸ್ತ್ ಕರ್ತವ್ಯಕ್ಕಾಗಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಭದ್ರತೆಯ ಕುರಿತು ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

Advertisement

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಬಂದೋಬಸ್ತ್ ಗಾಗಿ 4 ಡಿ.ವೈ.ಎಸ್.ಪಿ 15 ಸಿಪಿಐ, 24 ಪಿ.ಎಸ್.ಐ, ಎ.ಎಸ್.ಐ ಮತ್ತು 700 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಹಿಳೆಯರು ಮತ್ತು ಹೆಣ್ಣು ಮಕ್ಕಳು ದಸರಾದಲ್ಲಿ ಪಾಲ್ಗೊಳ್ಳುವುದರಿಂದ ಆಯಕಟ್ಟಿ ಸ್ಥಳಗಳಲ್ಲಿ 100 ಮಂದಿ ಮಹಿಳಾ ಸಿಬ್ಬಂದಿಗಳನ್ನು ಕೂಡ ನಿಯೋಜಿಸಲಾಗುತ್ತಿದೆ. ಮಾತ್ರವಲ್ಲದೇ 200 ಗೃಹ ರಕ್ಷಕರು, ಕೆ.ಎಸ್.ಆರ್.ಪಿಯ 3 ತುಕಡಿ, ಡಿ.ಎ.ಆರ್ 13 ತುಕಡಿಗಳನ್ನು ನೇಮಿಸಲಾಗುತ್ತಿದೆ. ಇದಲ್ಲದೆ ದಸರ ಕಾರ್ಯಕ್ರಮದ ಪ್ರಯುಕ್ತ ಭದ್ರತಾ ದೃಷ್ಟಿಯಿಂದ ವಿಧ್ವಂಸಕ ತಪಾಸಣಾ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದಸರಾ ದಿನದಂದು ನಗರದ ಹೊರ ವಲಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸುಗಮ ಸಂಚಾರ ಕಾಪಾಡುವ ನಿಟ್ಟಿನಲ್ಲಿ ಗಸ್ತು ಕರ್ತವ್ಯಕ್ಕಾಗಿ 10 ಜೀಪುಗಳಲ್ಲಿ ಮತ್ತು 12 ಮೋಟಾರ್ ಬೈಕ್‍ನಲ್ಲಿ ಸಿಬ್ಬಂದಿಗಳನ್ನು ನೇಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಮಡಿಕೇರಿ ಮತ್ತು ಗೋಣಿಕೊಪ್ಪದ ಜನ ನಿಬಿಡ ಪ್ರದೇಶಗಳಲ್ಲಿ ಒಟ್ಟು 40 ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಮಡಿಕೇರಿ ನಗರದಲ್ಲಿ ವಿಡಿಯೋ ಚಿತ್ರಿಕರಣಕ್ಕಾಗಿ ಒಟ್ಟು 17 ವಿಡಿಯೋಗ್ರಾಫರ್‍ಗಳನ್ನು ನೇಮಿಸಲಾಗುತ್ತದೆ. ದಸರಾ ವೀಕ್ಷಣೆಗಾಗಿ ಸೇರುವ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕಾಗಿ 7 ರ್ಯಾಂಬೋ ತಂಡವನ್ನು ನೇಮಿಸಲಾಗುತ್ತದೆ. ಈ ತಂಡ ಗುಂಪು ಘರ್ಷಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್.ಪಿ. ತಿಳಿಸಿದರು. ದಸರಾ ದಿನದಂದು ನಗದರಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳಲಿದ್ದು ಈ ಸಂದರ್ಭದಲ್ಲಿ ಪಿಕ್‍ಪಾಕೆಟ್, ಸರಗಳ್ಳತನ, ಮಹಿಳೆಯರನ್ನು ಚುಡಾಯಿಸುವುದು ಮತ್ತಿತರ ಅಪರಾಧ ಪ್ರಕರಣಗಳು ನಡೆಯುವ ಸಂಭವವಿರುವ ಕಾರಣ ಇಂತಹ ಅಪರಾಧ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಮಫ್ತಿಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳ 7 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

Advertisement

ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ನಡೆಯಲಿರುವ ಆಯುಧ ಪೂಜೆ, ದಸರಾ ಕಾರ್ಯಕ್ರಮದ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅ.7 ರ ಬೆಳಗ್ಗೆ 6 ಗಂಟೆಯಿಂದ ಅ.9 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ 10 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅ.7 ರ ಮಧ್ಯರಾತ್ರಿಯಿಂದ ಅ.9 ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ನಗರ ಹಾಗೂ ಗೋಣಿಕೊಪ್ಪದ 10 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror