ಮತ್ತೆ ‘ನಮೋ’ ಆಡಳಿತದ ಮುನ್ಸೂಚನೆಯ ಫಲಿತಾಂಶ

May 23, 2019
10:15 AM

ನವದೆಹಲಿ : ಲೋಕಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಸಂಪೂರ್ಣವಾಗಿ ಹೊರಬೀಳಲಿದೆ. ಈಗಾಗಲೇ ಲಭ್ಯವಾಗುವ ಮುನ್ಸೂಚನೆಯ ಪ್ರಕಾರ ಮತ್ತೆ ಎನ್ ಡಿ ಎ ಅಧಿಕಾರಕ್ಕೇರುವುದು ಹತ್ತಿರವಾಗಿದೆ. ಕೇವಲ ಬಿಜೆಪಿ ಮಾತ್ರವೇ 290 ಸ್ಥಾನಗಳಲ್ಲಿ ಮುನ್ನಡೆ ಹೊಂಡಿದ್ದು  ಮೈತ್ರಿಕೂಟಗಳು ಸೇರಿದಂತೆ 341 ಸ್ಥಾನಗಳಲ್ಲಿ  ಈಗ ಮುನ್ನಡೆ ಹೊಂದಿದೆ. ಹೀಗಾಗಿ ಈಗಿನ ಸೂಚನೆ ಪ್ರಕಾರ “ನಮೋ” ಆಡಳಿತ ಮತ್ತೆ ಪಡೆಯುವುದು  ಸ್ಪಷ್ಟವಾಗುತ್ತಿದೆ.

ಆದರೆ ಕಾಂಗ್ರೆಸ್ 63 ಸ್ಥಾನಗಳಲ್ಲಿ  ಮಾತ್ರವೇ ಮುನ್ನಡೆ ಸಾಧಿಸಿದ್ದು ಮೈತ್ರಿಕೂಟ  ಪಕ್ಷಗಳು ಸೇರಿಸಿ 96 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ.

ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿತ್ತು ಎಂಬುದನ್ನು ಸಾಬೀತುಪಡಿಸಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಧಿಕಾರದತ್ತ ಮುನ್ನಡೆದಿದೆ. ಮತ ಎಣಿಕೆ ಆರಂಭಗೊಂಡು ಎರಡು ಗಂಟೆಯಲ್ಲಿಯೇ ಎನ್.ಡಿ.ಎ ಸ್ಪಷ್ಟ ಬಹುಮತದತ್ತ ಮುನ್ನಡೆದಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಎನ್.ಡಿ.ಎ ಭಾರೀ ಮುನ್ನಡೆ ಪಡೆದಿದೆ. ಕೇರಳದಲ್ಲಿ ಮಾತ್ರ ಯುಪಿಎಗೆ ಮುನ್ನಡೆ ಇದೆ‌. ಕೇರಳದ 20 ಕ್ಷೇತ್ರಗಳಲ್ಲಿ ಕಾಸರಗೋಡು ಸೇರಿ 19 ಕಡೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆಯಲ್ಲಿದೆ. ಒಟ್ಟಿನಲ್ಲಿ ಮೊದಲ ಎರಡು ಗಂಟೆಗಳ ಟ್ರೆಂಡ್ ಗಮನಿಸಿದರೆ ದೇಶದಲ್ಲಿ 350 ಕ್ಕೂ ಹೆಚ್ಚು ಸ್ಥಾನ ಪಡೆದು ಎನ್.ಡಿ.ಎ ಅಧಿಕಾರಕ್ಕೆ ಬರುವ ಸ್ಪಷ್ಟ ಸೂಚನೆ ನೀಡಿದೆ. ಬಿಜೆಪಿ ಮಾತ್ರ ಮ್ಯಾಜಿಕ್ ಸಂಖ್ಯೆ 272ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror