ಮಂಗಳೂರು/ಸುಳ್ಯ: ಶಿರಾಡಿ ಘಾಟಿಯಲ್ಲಿ 4 ದಿನಗಳ ಕಾಲ ರಾತ್ರಿ ವಾಹನ ಸಂಚಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ 5 ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿಷೇಧಿಸಿ ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಆ.9 ರಿಂದ ಆ.12 ರ ವರೆಗೆ 4 ದಿನಗಳ ಕಾಲ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ನಿಷೇಧಿಸಲಾಗಿದೆ.
ಶಿರಾಡಿ ಘಾಟಿಯಲ್ಲಿ ಮಳೆಯ ಕಾರಣದಿಂದ ಮರಗಳು ಬಾಗುವ , ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಚಾರ್ಮಾಡಿ ರಸ್ತೆಯಲ್ಲೂ ವಾಹನ ಸಂಚಾರ ಸ್ಥಗಿತವಾಗಿದೆ. ಚಾರ್ಮಾಡಿ ರಸ್ತೆಯಲ್ಲೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರ ನಿಷೇಧಿಸಿ ಆ.14 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel