ಮಳೆ ಹಿನ್ನೆಲೆ : ಶಿರಾಡಿ ಘಾಟಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

August 9, 2019
9:34 PM

ಮಂಗಳೂರು/ಸುಳ್ಯ: ಶಿರಾಡಿ ಘಾಟಿಯಲ್ಲಿ 4 ದಿನಗಳ ಕಾಲ ರಾತ್ರಿ ವಾಹನ ಸಂಚಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ 5 ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿಷೇಧಿಸಿ ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಆದೇಶ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿರುವ‌ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ವಾಹನ‌ ಸಂಚಾರವನ್ನು ಆ.9 ರಿಂದ ಆ.12 ರ ವರೆಗೆ 4 ದಿನಗಳ ಕಾಲ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ನಿಷೇಧಿಸಲಾಗಿದೆ.

ಶಿರಾಡಿ ಘಾಟಿಯಲ್ಲಿ ಮಳೆಯ ಕಾರಣದಿಂದ ಮರಗಳು ಬಾಗುವ , ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಚಾರ್ಮಾಡಿ ರಸ್ತೆಯಲ್ಲೂ ವಾಹನ ಸಂಚಾರ  ಸ್ಥಗಿತವಾಗಿದೆ. ಚಾರ್ಮಾಡಿ ರಸ್ತೆಯಲ್ಲೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರ ನಿಷೇಧಿಸಿ ಆ.14 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror