ಮಳೆಹಾನಿ ಕಾರಣ ಮತ್ತು ಪರಿಹಾರದ ಕುರಿತು ಅಧ್ಯಯನ : ಪೊನ್ನಂಪೇಟೆ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗಳಿಗೆ ವರದಿ

June 29, 2019
10:00 AM

ಮಡಿಕೇರಿ: ಪೊನ್ನಂಪೇಟೆ ಹಳ್ಳಿಗಟ್ಟು ಗ್ರಾಮದ ಕೂರ್ಗ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್‍ನಾಲಜಿ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಮಳೆಹಾನಿ, ಭೂಕುಸಿತ ಮತ್ತು ನಂತರದ ದಿನಗಳ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

Advertisement
Advertisement
Advertisement

ಕಾಲೇಜ್‍ನ ಅಂತಿಮ ಪದವಿಯ ವಿದ್ಯಾರ್ಥಿಗಳಾದ ವಿ.ಪುನೀತ್ ವಿಶ್ವಾಸ್, ವಿ.ರವಿಕುಮಾರ್, ಟಿ.ಸ್ವರೂಪ್ ಹಾಗೂ ಎನ್.ಎ.ಹಾನಿಯಾ ಅವರುಗಳು ಇಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಭೇಟಿಯಾಗಿ ಅಧ್ಯಯನದ ವರದಿಯನ್ನು ಸಲ್ಲಿಸಿದರು.

Advertisement

ಪರಿಸರಕ್ಕೆ ಪೂರಕವಾದ ಪರಿಹಾರ ಕ್ರಮಗಳಿಂದ ಮುಂದೆ ಸಂಭವಿಸಬಹುದಾದ ಪ್ರಾಕೃತಿಕ ಅನಾಹುತಗಳನ್ನು ತಡೆಗಟ್ಟಬಹುದಾಗಿದೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿಗಳು,   ಜಿಲ್ಲೆಯ ಸುಮಾರು 105 ಪ್ರದೇಶಗಳಲ್ಲಿ ಮಳೆಹಾನಿಯಾಗಿದ್ದು, ಇವುಗಳಲ್ಲಿ 80 ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದೆ. ಸಂಪಾಜೆ ಮತ್ತು ಸೋಮವಾರಪೇಟೆ ರಸ್ತೆಯ ಪ್ರದೇಶಗಳು ಹೆಚ್ಚು ಹಾನಿಯಾಗಿದ್ದು, ಕಠಿಣ ಪರಿಸ್ಥಿತಿಯನ್ನು ಎದುರಿಸಿವೆ. ಆಗಸ್ಟ್ ತಿಂಗಳಿನಲ್ಲಿ ಅತಿವೃಷ್ಟಿ ಸಂಭವಿಸಿದ್ದು, ಅದಾದ ಒಂದೇ ವಾರದಲ್ಲಿ ನಾವು ಅಧ್ಯಯನವನ್ನು ಆರಂಭಿಸಿದೆವು. ನಮ್ಮ ಪ್ರಯತ್ನಕ್ಕೆ ಕಾಲೇಜು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ, ಜಿಲ್ಲಾಡಳಿತ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ಕೆಲವು ಪರಿಸರ ತಜ್ಞರೂ ಸಹಕಾರ ನೀಡಿದ್ದಾರೆ.
ಅತಿವೃಷ್ಟಿಯಿಂದಾಗಿ ಭೂಕುಸಿತ ಉಂಟಾಗಿ ಹೆಚ್ಚು ಅನಾಹುತವಾದ ಕಾರಣ ಮಣ್ಣಿನ ಪರೀಕ್ಷೆಗೆ ಆದ್ಯತೆ ನೀಡಲಾಯಿತು. ಹೆಚ್ಚು ಹಾನಿಯಾದ ಪ್ರದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಈ ಹಿಂದೆ ಸಂಭವಿತ್ತೇ ಎಂದು ಇತಿಹಾಸದ ಪುಟಗಳಿಂದ ತಿಳಿದುಕೊಳ್ಳುವ ಪ್ರಯತ್ನ ಮಾಡಲಾಯಿತು. ಇದಕ್ಕಾಗಿ ಜಿಲ್ಲೆಯ ಬರಹಗಾರ ಭಾರಧ್ವಜ್ ಅವರ ಪುಸ್ತಕವನ್ನೂ ಅಧ್ಯಯನ ನಡೆಸಲಾಯಿತು. ಮಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿದ ಗ್ರಾಮಸ್ಥರ ಅಭಿಪ್ರಾಯವನ್ನೂ ಸಂಗ್ರಹಿಸಲಾಯಿತು. ಅತಿ ಮಳೆಯಿಂದ ಗದ್ದೆ ಮತ್ತು ತೋಟಗಳಿಗೆ ಆದ ಹಾನಿಯ ಬಗ್ಗೆ ಗ್ರಾಮಸ್ಥರು ಅಸಹಾಯಕತೆ ವ್ಯಕ್ತಪಡಿಸಿದ ಹಿನ್ನೆಲೆ ಕೆಸರು ಮತ್ತು ಮರಳಿನಿಂದ ತುಂಬಿ ಹೋಗಿರುವ ಭೂಮಿಯಲ್ಲಿ ಮತ್ತೆ ಕೃಷಿ ಕಾರ್ಯ ನಡೆಸಬಹುದೇ ಎಂದು ವೈಜ್ಞಾನಿಕವಾಗಿ ಅಧ್ಯಯನ ನಡೆಸಲಾಗಿದೆ.

ಕಡಿದಾದ ಮತ್ತು ಇಳಿಜಾರು ಪ್ರದೇಶಗಳು ಅತಿವೃಷ್ಟಿಯಿಂದ ಸ್ಥಾನಪಲ್ಲಟವಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕಾಂಕ್ರಿಟ್ ತಡೆಗೋಡೆಗಳ ಬದಲಿಗೆ ಪ್ರಕೃತಿಗೆ ಪೂರಕವಾಗಿ ಇಂತಹ ಪದೇಶದಲ್ಲಿ ಹುಲ್ಲುಗಳನ್ನು ಬೆಳೆಸುವುದರ ಬಗ್ಗೆ ವರದಿಯಲ್ಲಿ ಸಲಹೆಗಳನ್ನು ನೀಡಲಾಗಿದೆ. ಜಿಲ್ಲೆಯ ಭೂಪ್ರದೇಶ ಹವಾಗುಣದ ಬದಲಾವಣೆಗೆ ತಕ್ಕಂತೆ ಹೊಂದಿಕೊಳ್ಳಬೇಕಾದರೆ ಅದಕ್ಕೆ ಬೆಂಬಲವಾಗಿ ಸಸ್ಯರಾಶಿಗಳೂ ಇರಬೇಕು. ಆಯಾ ಪ್ರದೇಶಕ್ಕೆ ಹೊಂದಿಕೆಯಾಗುವ ಹುಲ್ಲು ಮತ್ತು ಸಸ್ಯಾಭಿವೃದ್ಧಿಯಿಂದ ಭೂಕುಸಿತದಂತಹ ಅನಾಹುತಗಳನ್ನು ತಡೆಗಟ್ಟಬಹುದಾಗಿದೆ ಎಂದು ಮಾಹಿತಿ ನೀಡಿದ ವಿದ್ಯಾರ್ಥಿಗಳಾದ ವಿ.ಪುನೀತ್‍ವಿಶ್ವಾಸ್, ವಿ.ರವಿಕುಮಾರ್, ಟಿ.ಸ್ವರೂಪ್ ಹಾಗೂ ಎನ್.ಎ.ಹಾನಿಯಾ ವರದಿಯಲ್ಲಿ ಸುಮಾರು 17 ಸಲಹೆಗಳನ್ನು ನಮೂದಿಸಲಾಗಿದೆ ಎಂದರು. ಪ್ರಕೃತಿಯಿಂದಾಗುವ ಅನಾಹುತಗಳ ತಡೆಗೆ ಪ್ರಕೃತಿಯಲ್ಲೇ ಪರಿಹಾರವಿದೆ ಎಂದು ಅಭಿಪ್ರಾಯಪಟ್ಟರು.

Advertisement

ಸಿಐಟಿಯ ಕಾರ್ಯದರ್ಶಿ ಸಿ.ರಾಕೇಶ್ ಪೂವಯ್ಯ, ಪ್ರಾಂಶುಪಾಲರಾದ ಪಿ.ಸಿ.ಕವಿತಾ ಹಾಗೂ ಹೆಚ್‍ಒಡಿ ಪ್ರಮುಖ್ ಗಣಪತಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪ್ರಯತ್ನವನ್ನು ಶ್ಲಾಘಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ
ಹಾನಿಯಾದ ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ
November 25, 2024
7:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror