ಮಹಾಮಳೆ ಹಾನಿ : ಕೊಡಗಿನ 7873 ಮಂದಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ

August 13, 2019
7:10 PM

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸಂಕಷ್ಟ ಎದುರಾಗಿತ್ತು. ಸದ್ಯದ ಮಾಹಿತಿಯಂತೆ  ಜಿಲ್ಲೆಯಲ್ಲಿ 147 ಮನೆಗಳು ಭಾಗಶಃ ಹಾನಿಯಾಗಿದ್ದು, 90 ಮನೆಗಳು ಪೂರ್ಣ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕು 32, ವಿರಾಜಪೇಟೆ 42, ಸೋಮವಾರಪೇಟೆ 73 ಮನೆಗಳು ಭಾಗಶಃ ಹಾನಿಯಾಗಿದ್ದು, ಮಡಿಕೇರಿ ತಾ. 15, ವಿರಾಜಪೇಟೆ 41 ಮತ್ತು ಸೋಮವಾರಪೇಟೆಯಲ್ಲಿ 34 ಮನೆಗಳು ಪೂರ್ಣ ಹಾನಿಯಾಗಿವೆ.

Advertisement
Advertisement
Advertisement

ಜಿಲ್ಲೆಯಲ್ಲಿ ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ 30, ವಿರಾಜಪೇಟೆ ತಾಲ್ಲೂಕಿನಲ್ಲಿ 32, ಸೋಮವಾರಪೇಟೆ ತಾಲ್ಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 8 ಪ್ರವಾಹ ಪೀಡಿತ ಪ್ರದೇಶಗಳಾಗಿವೆ. ಈವರೆಗೆ ಜಿಲ್ಲೆಯಲ್ಲಿ ಸುಮಾರು 1507 ಕ್ಕೂ ಹೆಚ್ಚು ಜನರು ಹಾಗೂ 19 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ಎನ್‍ಡಿಆರ್ ಎಫ್, ಭಾರತೀಯ ಸೇನೆ, ಪೊಲೀಸ್ ಇಲಾಖೆ, ಕಂದಾಯ, ಗ್ರಾಮ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆ ಸಹಕಾರದಲ್ಲಿ ರಕ್ಷಣೆ ಮಾಡಲಾಗಿದೆ.

Advertisement

ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರ ತೆರೆಯಲಾಗಿದ್ದು, 2270 ಕುಟುಂಬಗಳ 7873 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಹಾಗೂ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸರಿಪಡಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆದಿದೆ. ಅತಿ ವೃಷ್ಟಿಯಿಂದಾಗಬಹುದಾದ ತೊಂದರೆಯನ್ನು ಎದುರಿಸಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.
ಜಿಲ್ಲೆಯ ಒಟ್ಟು 6 ರಸ್ತೆಗಳು ಭೂಕುಸಿತ ಹಾಗೂ ಪ್ರವಾಹದಿಂದ ಬಂದ್ ಆಗಿವೆ. ಮಡಿಕೇರಿ-ವಿರಾಜಪೇಟೆ, ಸಿದ್ದಾಪುರ-ಕರಡಿಗೋಡು, ಮಡಿಕೇರಿ-ವಿರಾಜಪೇಟೆ-ಮಾಕುಟ್ಟ, ಮೂರ್ನಾಡು-ನಾಪೋಕ್ಲು, ಸಿದ್ದಾಪುರ-ಕೊಂಡಂಗೇರಿ, ಗಾಳಿಬೀಡು-ಪಾಟಿ-ಕಾಲೂರು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror